Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ : ತುರುವನೂರು ಹೋಬಳಿಯಲ್ಲಿ ಬಿತ್ತನೆ ಬೀಜ ಖರೀದಿಗೆ ರೈತರ ನಿರುತ್ಸಾಹ…!

---Advertisement---

 

ವರದಿ ಮತ್ತು ಫೋಟೋ ಕೃಪೆ
ಶ್ರೀಧರ ಡಿ. ರಾಮಚಂದ್ರಪ್ಪ, ತುರುವನೂರು
ಮೊ :  7899789545

ಚಿತ್ರದುರ್ಗ, (ಜೂ.16) : ರಾಜ್ಯದಲ್ಲಿ ಕೆಲವೆಡೆ ಮಳೆಯಾಗುತ್ತಿದ್ದರೂ ಮುಂಗಾರು ಹಂಗಾಮು ನಿರೀಕ್ಷೆಯಂತೆ ಆಗಿಲ್ಲ. ಇನ್ನು ಚಿತ್ರದುರ್ಗ ಜಿಲ್ಲೆಯಲ್ಲೂ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದ ಕಾರಣ ರೈತರ ಉಳುಮೆ ಪ್ರಮಾಣ ಕೂಡ ಕುಂಠಿತಗೊಂಡಿದೆ.

ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮುಂಗಾರು ಮಳೆ ಪ್ರವೇಶಿಸುವುದು ವಾಡಿಕೆ. ಆದರೆ ಈ ಬಾರಿ ಮಳೆ ಸುರಿಯದಿರುವುದು ರೈತರನ್ನು ಚಿಂತೆಗೆ ದೂಡಿದೆ. ತಾಲ್ಲೂಕಿನ ತುರುವನೂರು ಹೋಬಳಿಯಲ್ಲಿ ಮುಂಗಾರು ಹಂಗಾಮು ಕೈಕೊಟ್ಟಿದ್ದು, ಈ ಭಾಗದ ರೈತ ದಿನ ಬೆಳಗಾದರೆ ಮುಗಿಲಿನತ್ತ ನೋಡುವ ಹಾಗಿದೆ.

ಭೂಮಿ ಹದ : ಮಳೆ ಕೊರತೆಯ ನಡುವೆಯೂ ರೈತರು ಬಿತ್ತನೆಗೆ ಜಮೀನು ಹದಗೊಳಿಸುತ್ತಿದ್ದಾರೆ. ಆದರೆ ಬಿತ್ತನೆಗೆ ಬೇಕಾದ ಬೀಜ-ಗೊಬ್ಬರ ಖರೀದಿಸಲು ಈ ಭಾಗದ ರೈತ ನಿರುತ್ಸಾಹ ತೋರಿದ್ದಾನೆ. ಈ ಹೋಬಳಿಯಲ್ಲಿ ಬಿತ್ತನೆ ಕಾರ್ಯ ಶೇಕಡಾ 25 ರಷ್ಟು ಮಾತ್ರ ಆಗಿದೆ.

ಜೂನ್ ಮಧ್ಯ ಭಾಗ ಎರಡನೇ ವಾರಕ್ಕೆ ಕಾಲಿಟ್ಟಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಬೀಜ – ಗೊಬ್ಬರ ಕೊಂಡುಕೊಳ್ಳುವುದರಲ್ಲಿ ಹಿಂದೇಟು ಹಾಕುತ್ತಿದ್ದಾರೆ.

ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ 2023-24 ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಬಿತ್ತನೆ ಬೀಜಗಳು ಸಮರ್ಪಕವಾಗಿ ಬಂದಿದ್ದು
ಈ ಭಾಗದ ಬಹುತೇಕ ರೈತರು ಬೆಳೆಯುವ ಶೇಂಗಾ ಸುಮಾರು 585 ಕ್ವಿಂಟಾಲ್ ಸರಬರಾಜಾಗಿದ್ದು, ಇದುವರೆಗೂ (ಜೂನ್ 15ಕ್ಕೆ)  ಕೇವಲ 100 ಕ್ವಿಂಟಾಲ್ ಮಾತ್ರ ರೈತರಿಂದ ಖರೀದಿಸಿದ್ದಾರೆ. ತೊಗರಿ ಬೀಜ 13 ಕ್ವಿಂಟಾಲ್ ದಾಸ್ತಾನು ಬಂದಿದ್ದು, ಖರೀದಿಯಾಗಿಲ್ಲ. ದ್ವಿದಳ ಧಾನ್ಯ ಸೋಯಾಬೀನ್ 30 ಕ್ವಿಂಟಾಲ್ ದಾಸ್ತಾನಿದ್ದು, ಖರೀದಿಯಾಗಿಲ್ಲ.

ಮತ್ತೊಂದು ವಾಣಿಜ್ಯ ಬೆಳೆ ಮೆಕ್ಕೆಜೋಳ ಸುಮಾರು 95 ಕ್ವಿಂಟಾಲ್ ಸರ್ಕಾರದಿಂದ ಬಂದಿದ್ದು,7 ಕ್ವಿಂಟಾಲ್ ಮಾತ್ರ ರೈತರಿಂದ ಖರೀದಿಯಾಗಿದೆ. ಸೂರ್ಯಕಾಂತಿ 26 ಕ್ವಿಂಟಾಲ್ ದಾಸ್ತಾನಿದ್ದು, ಖರೀದಿಯಾಗಿಲ್ಲ. ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ತುರುವನೂರು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ನಾಗರಾಜ್ ಅವರು ಪ್ರತಿಕ್ರಿಯಿಸಿದ್ದಾರೆ.

ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ದಾಸ್ತಾನಿರುವ ಬಿತ್ತನೆ ಬೀಜಗಳು ರೈತರಿಂದ ಖರೀದಿಯಾಗುವ ಆಶಾಭಾವನೆಯನ್ನು ಕೃಷಿ ಅಧಿಕಾರಿ ನಾಗರಾಜ್ ಸುದ್ದಿಒನ್ ಗೆ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment