Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಡಿಸೆಂಬರ್ 15 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಡಿ. 12 :ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷರ, ಕಾರ್ಯದರ್ಶಿ, ಖಂಜಾಚಿ, ರಾಜ್ಯ ಪರಿಷತ್ ಸದಸ್ಯರ ಹಾಗೂ ಪದಾಧಿಕಾರಿಗಳ ಮತ್ತು ನಿರ್ದೆಶಕರ ಪದಗ್ರಹಣ ಸಮಾರಂಭವೂ ಡಿ. 15 ರಂದು ಭಾನುವಾರ 10 ಗಂಟೆಗೆ ನಗರದ ತ. ರಾ.ಸು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಾಲತೇಶ್ ಮುದ್ದಜ್ಜಿ ತಿಳಿಸಿದರು.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2024 ರಿಂದ 2029ರವರೆಗೆ ನಮ್ಮ ಪದಾಧಿಕಾರಿಗಳು ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಇವರ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಮಾರಂಭವನ್ನು ಯೋಜನೆ ಮತ್ತು ಸಾಂಖ್ಯಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಉದ್ಘಾಟನೆ ಮಾಡಲಿದ್ದಾರೆ. ಸಂಸದರಾದ ಗೋವಿಂದ ಕಾರಜೋಳ, ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ, ರಾಜ್ಯ ವಕ್ಷ್ ಮಂಡಲಿ ಅಧ್ಯಕ್ಷರಾದ ಅನ್ವರ್ ಭಾಷಾ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷರಾದ ಡಾ.ಬಿ.ಯೋಗಿಶ್ ಬಾಬು, ಆದಿಜಾಂಬವ ಅಭೀವೃದ್ದಿ ನಿಗಮ ಮಂಡಳಿ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್, ಸಫಾಯಿ ಕರ್ಮಚಾರಿ ಅಯೋಗದ ಅಧ್ಯಕ್ಷರಾದ ಶ್ರೀಮತಿ ಸವಿತಾ ರಘು, ನಗರಾಭೀವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ತಾಜ್‍ಪೀರ್, ನಗರಸಭೆಯ ಅಧ್ಯಕ್ಷರಾದ ಶ್ರೀಮತಿ ಸುಮಿತ್ರ ರಾಘವೇಂದ್ರ, ಜಿಲ್ಲಾಧಿಕಾರಿಗಳಾದ ವಂಕಟೇಶ್, ಜಿ.ಪಂ.ಸಿಇಓ ಸೋಮಶೇಖರ್ ಜಿಲ್ಲಾ ರಕ್ಷಣಾಧಿಕಾರಿಗಳಾದ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿಗಳಾದ ಕುಮಾರಸ್ವಾಮಿ, ಉಪ ವಿಭಾಗಾಧಿಕಾರಿಗಳಾದ ಕಾರ್ತಿಕ್, ತಹಶೀಲ್ದಾರ್ ನಾಗವೇಣಿ, ರಾ.ಹೆ.ವಿಭಾಗದ ಮುಖ್ಯ ಅಭಿಯಂತರರಾದ ಕೆ.ಜಿ.ಜಗದೀಶ್, ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಉಪ ನಿರ್ದೆಶಕರಾದ ಪುಟ್ಟಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್, ಡಿ.ಎಚ್.ಓ. ಡಾ.ರೇಣುಪ್ರಸಾದ್, ಜಿಲ್ಲಾ ಸರ್ಜನ್ ಡಾ.ರವಿಂದ್ರ ಕ್ಷೇತ್ರ ಶಿಕಣಾಧಿಕಾರಿಗಳಾದ ನಾಗಭೂಷಣ ಭಾಗವಹಿಸಲಿದ್ದಾರೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...