ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಚಿತ್ರದುರ್ಗ : ಕಮ್ಯುನಿಸ್ಟ್ ಪಾರ್ಟಿಗೆ ಹೋರಾಟ, ತ್ಯಾಗ, ಬಲಿದಾನದ ಇತಿಹಾಸವಿದೆ ಎಂದು ಸಿ.ಪಿ.ಐ. ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದರು.
ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎ.ಐ.ಟಿ.ಯು.ಸಿ. ವತಿಯಿಂದ ಯೂನಿಯನ್ ಪಾರ್ಕ್ ಎದುರು ನಿರ್ಮಿಸಿರುವ ಕಾಮ್ರೆಡ್ ಕೆ.ಚಂದ್ರಪ್ಪ ಭವನ ಉದ್ಗಾಟಿಸಿ ಮಾತನಾಡಿದರು.
ಕಾಂ.ಜಿ.ಚಂದ್ರಪ್ಪನವರ ಹೆಸರಿನಲ್ಲಿ ಉದ್ಗಾಟನೆಗೊಂಡಿರುವ ಭವನ ಕೇವಲ ಭವನವಾಗಿ ಉಳಿಯಬಾರದು. ಜನ ಚಳುವಳಿಯ ಕೇಂದ್ರವಾಗಬೇಕು. ಕಮ್ಯುನಿಸ್ಟ್ ಪಕ್ಷ ಶತಮಾನೋತ್ಸವದ ಹೊಸ್ತಿಲಿನಲ್ಲಿದೆ. ದೊಡ್ಡ ಮಟ್ಟದಲ್ಲಿ ಆಗಬೇಕು. ಭವನದಲ್ಲಿ ಸಭೆ ಸಮಾರಂಭಗಳಷ್ಟೆ ಅಲ್ಲ. ರೈತರು, ಮಹಿಳೆಯರು, ಕಾರ್ಮಿಕರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಆಳುವ ಸರ್ಕಾರಗಳ ವಿರುದ್ದ ಹೋರಾಡಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಚಳುವಳಿಯನ್ನು ಮುನ್ನಡೆಸಿಕೊಂಡು ಹೋಗಬೇಕಾಗಿರುವುದರಿಂದ ನಿಷ್ಠಾವಂತ ಕಾರ್ಯಕರ್ತರು, ನಾಯಕರುಗಳು ಕಮ್ಯುನಿಸ್ಟ್ ಪಾರ್ಟಿಗೆ ಬೇಕು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್. ಕುಟುಂಬ ರಾಜಕಾರಣಕ್ಕೆ ಅಂಟಿಕೊಂಡಿದೆ. ಕಮ್ಯುನಿಸ್ಟ್ ಪಾರ್ಟಿಗಾಗಿ ಜೀವ ಕೊಡಲು ಸಿದ್ದವಿದೆ. ಅಧಿಕಾರ, ಕುರ್ಚಿಗಾಗಿ ಅಲ್ಲ. ರೋಟಿ, ಕಪ್‍ಡ, ಔರ್ ಮಖಾನ್ ಕಮ್ಯುನಿಸ್ಟ್ ಪಾರ್ಟಿಯ ಧ್ಯೇಯವಾಗಿದ್ದು, ಜಿಲ್ಲೆಯಲ್ಲಿರುವ ಎಲ್ಲಾ ಬಡವರಿಗೆ ಸರ್ಕಾರದಿಂದ ವಸತಿ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ನಿರಂತರವಾಗಿ ಹೋರಾಡೋಣ. ಇದಕ್ಕೆ ಕಾರ್ಯಕರ್ತರು ಬೆಂಬಲವಾಗಿರಬೇಕೆಂದು ಕಾಂ.ಸಾತಿ ಸುಂದರೇಶ್ ಕರೆ ನೀಡಿದರು.
ಸಿ.ಪಿ.ಐ.ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು, ರಾಜ್ಯ ಮಂಡಳಿ ಸದಸ್ಯ ಕಾಂ.ಸಿ.ವೈ.ಶಿವರುದ್ರಪ್ಪ, ಎ.ಐ.ಟಿ.ಯು.ಸಿ. ರಾಜ್ಯ ಸಮಿತಿ ಉಪಾಧ್ಯಕ್ಷ ಕಾಂ.ಟಿ.ಆರ್.ಉಮಾಪತಿ
ಕಾಂ.ದೊಡ್ಡುಳ್ಳಾರ್ತಿ ಕರಿಯಣ್ಣ, ಎ.ಐ.ಟಿ.ಯು.ಸಿ.ಜಿಲ್ಲಾ ಮಂಡಳಿ ಅಧ್ಯಕ್ಷ ಕಾಂ.ಬಿ.ಬಸವರಾಜ್ ವೇದಿಕೆಯಲ್ಲಿದ್ದರು.
ಕಾಂ.ಈ.ಸತ್ಯಕೀರ್ತಿ ಸೇರಿದಂತೆ ಕಮ್ಯುನಿಸ್ಟ್ ಕಾರ್ಯಕರ್ತರು ಭವನ ಉದ್ಗಾಟನೆಯಲ್ಲಿ ಪಾಲ್ಗೊಂಡಿದ್ದರು.
ದಾವಣಗೆರೆ ಇಷ್ಟಾ ಸಂಘಟನೆಯವರು ಕ್ರಾಂತಿಗೀತೆಗಳನ್ನು ಹಾಡಿದರು.
ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…
ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಸುದ್ದಿಒನ್, ಹರಿಹರ, ಮಾರ್ಚ್. 19 : ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…