ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್.15 : ಸುಣ್ಣಗಾರರ ಬೀದಿ ಕರುವಿನಕಟ್ಟೆ ಸರ್ಕಲ್‍ನಲ್ಲಿರುವ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ಷಢಾದಾರ ಪ್ರತಿಷ್ಠಾಪನೆ ಮತ್ತು ಭೂಮಿ ಪೂಜೆ ಕಾರ್ಯಕ್ರಮ ಮಾ.17 ರಂದು ಬೆಳಿಗ್ಗೆ 10-25 ಕ್ಕೆ ನಡೆಯಲಿದೆ.
ಆದಿಶಂಕರಚಾರ್ಯ ಲಕ್ಷ್ಮಿನೃಸಿಂಹ ಹರಿಹರಪುರದ ಪೀಠಾಧ್ಯಕ್ಷರಾದ ಸ್ವಾಮಿ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು, ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮಿ, ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮಿ, ಡಾ.ಶಾಂತವೀರ ಮಹಾಸ್ವಾಮಿ, ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ, ಬಸವ ಮಡಿವಾಳ ಮಾಚಿದೇವಸ್ವಾಮಿ, ಇಮ್ಮಡಿ ಸಿದ್ದರಾಮೇಶ್ವರಸ್ವಾಮಿ, ಕೃಷ್ಣಯಾದವಾನಂದಸ್ವಾಮಿ, ದೇವಾಲಯ ಸಂವರ್ಧನಾ ಸಮಿತಿಯ ಮನೋಹರ್ ಮಠದ ಇವರುಗಳು ಸಾನಿಧ್ಯ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಾಸಕರುಗಳಾದ ಕೆ.ಸಿ.ವೀರೇಂದ್ರಪಪ್ಪಿ, ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಇವರುಗಳು ಆಗಮಿಸಲಿದ್ದಾರೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತನು, ಮನ, ಧನ ಅರ್ಪಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಕಾರ್ಯಕಾರಿ ಸಮಿತಿ ಅಧ್ಯಕ್ಷ
ಎನ್.ಓಂಕಾರ್ ಮನವಿ ಮಾಡಿದ್ದಾರೆ.
ಹೆಚ್ಚಿನ ವಿವರಗಳಿಗೆ ಮೊ : 9844148872, 8123466164 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್