Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಪೊಲೀಸ್ ಕಲ್ಯಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ; ಎಸ್ಸೆಸ್ಸೆಲ್ಸಿ, ಪಿಯುಸಿ ಟಾಪರ್ಸ್‌ಗೆ ಸನ್ಮಾನ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 17 : ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದಿಂದ ಪೊಲೀಸ್ ಕಲ್ಯಾಣಿಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು.

ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಭೀಮಾರೆಡ್ಡಿ ಧ್ವಜಾರೋಹಣ ನೆರವೇರಿಸಿ ನಂತ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿ ಮಾತನಾಡುತ್ತ ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಹಿರಿಯ ತ್ಯಾಗ ಬಲಿದಾನವಿದೆ. ಸುಲಭವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದ್ದಲ್ಲ. ಬ್ರಿಟೀಷರ ಗುಂಡಿಗೆ ಎದೆಯೊಡ್ಡಿ ಮಹನೀಯರು ನೆತ್ತರು ಸುರಿಸಿದ್ದಾರೆ. ಅಂತವ ಮಹಾನ್ ಪುರುಷರನ್ನು ಸ್ವಾತಂತ್ರ್ಯ ದಿನಾಚರಣೆಯಂದು ಸ್ಮರಿಸಿಕೊಂಡು ಅವರುಗಳು ಹಾಕಿಕೊಟ್ಟಿರುವ ಮಾರ್ಗದಲ್ಲಿ ಎಲ್ಲರೂ ನಡೆಯಬೇಕಿದೆ ಎಂದರು.

ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಪೊಲೀಸರ ಮಕ್ಕಳನ್ನು ಗೌರವಿಸಿದರಿಂದ ಮತ್ತಷ್ಟು ಉತ್ತೇಜನ ನೀಡಿದಂತಾಗುತ್ತದಲ್ಲದೆ ಉನ್ನತ ಶಿಕ್ಷಣದಲ್ಲಿ ಹೆಚ್ಚು ಸಾಧನೆಗೈಯಲು ಸಹಕಾರಿಯಾಗಲಿದೆ ಎಂದು ಹೇಳಿದರು.
ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದ ಗೌರವ ಕಾರ್ಯದರ್ಶಿ ಯೂಸೂಫ್, ಕೋಶಾಧ್ಯಕ್ಷರಾದ ಹನುಮಂತರೆಡ್ಡಿ, ಸಹ ಕಾರ್ಯದರ್ಶಿ ನಾಗೇಂದ್ರಪ್ಪ ನಿವೃತ್ತ ಡಿ.ವೈ.ಎಸ್ಪಿ.ಗಳಾದ ಸೈಯದ್ ಇಸಾಕ್, ಮಹಾಂತರೆಡ್ಡಿ, ಬಸವರಾಜ್, ಅಬ್ದುಲ್‍ರೆಹಮಾನ್, ನಿವೃತ್ತ ಸಬ್‍ಇನ್ಸ್‍ಪೆಕ್ಟರ್ ನಾಗರಾಜ್ ಹಾಗೂ ಸಂಘದ ನಿರ್ದೇಶಕರುಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now