ಚಿತ್ರದುರ್ಗ. ಆ.15: ಇಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನಾಚರಣೆ ಅಂಗವಾಗಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ಡಾ.ಕೆ.ಜೆ.ಕಾಂತರಾಜ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಸಿದ್ರಾಮ ಮಾರಿಹಾಳ, ತಹಶೀಲ್ದಾರ್ ಗೋವಿಂದರಾಜು ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಹಾಜರಿದ್ದರು.










