ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ನ. 19 : ಇಂದಿರಾ ಗಾಂಧಿ ಅವರು `ಗರೀಬಿ ಹಠಾವೋ’ ಎಂಬ ಘೋಷಣೆಯ ಮೂಲಕ ಬಡವರ ಜೀವನ ಸುಧಾರಣೆಗೆ ದಾರಿತೋರಿದರು. ಬ್ಯಾಂಕುಗಳ ರಾಷ್ಟ್ರೀಕರಣ ಮೂಲಕ ಶ್ರೀಸಾಮಾನ್ಯರಿಗೂ ಬ್ಯಾಂಕಿಂಗ್ ವ್ಯವಸ್ಥೆಯ ಲಾಭ ತಲುಪುವಂತೆ ಮಾಡಿದರು. ಹಸಿರು ಕ್ರಾಂತಿಯ ಮೂಲಕ ದೇಶವನ್ನು ಅನ್ನದಲ್ಲಿ ಸ್ವಾವಲಂಬಿಯನ್ನಾಗಿ ಮಾಡಿ, ಅನ್ನದಾತರ ಗೌರವ ಕಾಪಾಡಿದರು ಎಂದು ಕಾಂಗ್ರೆಸ್ ಮುಖಂಡರಾದ ಮುನಿರಾ ಮಕಾಂದರ್ ತಿಳಿಸಿದರು.
ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ದೇಶದ ಪ್ರಥಮ ಮಹಿಳಾ ಪ್ರಧಾನ ಮಂತ್ರಿ, ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾಗಾಂಧಿರವರ 108ನೇ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕೇಕ್ ಕತ್ತರಿಸುವುದರ ಮೂಲಕ ಆಚರಣೆ ಮಾಡಿ ಮಾತನಾಡಿದ ಅವರು ಶ್ರೀಮತಿ ಇಂದಿರಾಗಾಂಧಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿದವರು. ಅಸಹಕಾರ ಚಳುವಳಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಹಕಾರ ನೀಡಲು 1930ರಲ್ಲಿ ಅವರು `ಬಾಲ ಚರಕ ಸಂಘ’ವನ್ನು ಮತ್ತು ಮಕ್ಕಳ `ವಾನರ ಸೇನೆ’ಯನ್ನು ಸ್ಥಾಪಿಸಿದರು. 1942ರಲ್ಲಿ ಅವರನ್ನು ಬಂಧಿಸಲಾಯಿತು. 1947ರಲ್ಲಿ ಮಹಾತ್ಮಾ ಗಾಂಧಿ ಅವರ ನೇತೃತ್ವದಲ್ಲಿ ಇಂದಿರಾ ಅವರು ದೆಹಲಿಯ ಕೋಮುಗಲಭೆ ಪೀಡಿತ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಿದರು. ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ 96 ಸಾವಿರ ಸೈನಿಕರನ್ನು ಶರಣಾಗತಿಗೊಳಿಸಿ, ಬಾಂಗ್ಲಾದೇಶ ನಿರ್ಮಾಣಕ್ಕೆ ಕಾರಣರಾದ ಇಂತಹ ಶಕ್ತಿಶಾಲಿ ನಾಯಕಿ `ದುರ್ಗೆ’ ಎಂದೇ ಜನಮನದಲ್ಲಿ ಅಮರರಾಗಿದ್ದಾರೆ. ಅವರ ಆದರ್ಶಗಳು, ದೇಶಭಕ್ತಿ ಮತ್ತು ದೃಢನಿಶ್ಚಯವು ನಮ್ಮೆಲ್ಲರಿಗೂ ಶಾಶ್ವತ ಪ್ರೇರಣೆ ಯಾಗಬೇಕಿದೆ ಎಂದರು.
ಇಂದಿರಾಗಾಂಧಿ 1966ರಿಂದ 1977ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರದ ಪ್ರಧಾನ ಮಂತ್ರಿಯಾಗಿ ದ್ದರು ಮತ್ತು ನಾಲ್ಕನೇ ಬಾರಿ 1980ರಿಂದ 1984ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ ಎಂದು ತಿಳಿಸಿದ ಅವರು ಶಾಸ್ತ್ರಿಯವರ ಹಠಾತ್ ಮರಣಾನಂತರ ಇಂದಿರಾಗಾಂಧಿ ಪ್ರಧಾನ ಮಂತ್ರಿಯಾದರು. ಇಂದಿರಾಗಾಂಧಿ ಯವರಿಂದ ಜನಾನುರಾಗಿ ರಾಜಕೀಯ ಸಿದ್ಧಾಂತಸ್ಥಾಪನೆ. ಚತುರ ಎದುರಾಳಿಗಳ ವಿರುದ್ಧ ಚುನಾವಣೆ ಗೆಲ್ಲುವಲ್ಲಿ ತನ್ನ ಸಾಮಥ್ರ್ಯದ ಪ್ರದರ್ಶನ. ಅವರಿಂದ ಹೆಚ್ಚು ಎಡ-ಪಕ್ಷೀಯ ಆರ್ಥಿಕ ನೀತಿಗಳ ಅನುಷ್ಠಾನ ಮತ್ತು ಕೃಷಿ ಉತ್ಪಾದಕತೆಗೆ ಬೆನ್ನು ತಟ್ಟಿ ಪ್ರೋತ್ಸಾಹ. 1971ರಲ್ಲಿ ಪಾಕಿಸ್ಥಾನದೊಂದಿಗೆ ನಡೆದ ಕದನದಲ್ಲಿ ಭಾರತದ್ದು ನಿರ್ಣಾಯಕ ಗೆಲುವು. ಈ ಸಂದರ್ಭದಲ್ಲಿ ಇಂದಿರಾ ಪ್ರಧಾನ ಮಂತ್ರಿ. 1975 ಅವರ ಪಾಲಿಗೆ ಒಂದು ಅಭದ್ರತೆಯ ಅವಧಿ. ಇದರಿಂದಾಗಿ ಆಗ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿಕೆ. ದೀರ್ಘ ಕಾಲೀನ ನಿರಂಕುಶ ಪ್ರಭುತ್ವ. ಪರಿಣಾಮವಾಗಿ, ಸೋಲರಿಯದ ಕಾಂಗ್ರೆಸ್ ಪಕ್ಷಕ್ಕೆ 1977ರ ಸಾರ್ವತ್ರಿಕ ಚುನಾವಣೆಯಲ್ಲಿ ಪರಾಭವ. 1980 ಚುನಾವಣೆ ಯಲ್ಲಿ ಕಾಂಗ್ರೆಸ್‍ಗೆ ಮತ್ತೆ ಜಯ. ಪ್ರಧಾನ ಮಂತ್ರಿ ಅಧಿಕಾರ ಮತ್ತೆ ಇಂದಿರಾ ಗಾಂಧಿ ಕೈಗೆ. 1984 ಜೂನ್‍ನಲ್ಲಿ, ದಂಗೆಕೋರರನ್ನು ಬಂಧಿಲೆಂದು ಗಾಂಧಿ ಆದೇಶದ ಮೇರೆಗೆ ಸಿಖ್‍ರ ಪವಿತ್ರ ಸ್ವರ್ಣ ಮಂದಿರದೊಳಕ್ಕೆ ಭಾರತೀಯ ಸೇನಾ ಪಡೆಯಿಂದ ಬಲವಂತ ಪ್ರವೇಶ. ಈ ಕಾರ್ಯಾಚರಣೆಯ ಪ್ರತೀಕಾರವಾಗಿ 1984 ಅಕ್ಟೋಬರ್ 31ರಂದು ಇಂದಿರಾ ಗಾಂಧಿ ಹತ್ಯೆಗೆ ತುತ್ತಾದರು ಎಂದರು.
ಕಾಂಗ್ರೆಸ್ ಮುಂಖಡರಾದ ನಜ್ಮಾತಾಜ್ ಮಾತನಾಡಿ, ಬಡವರ ಪರವಾದ ನೀತಿಗಳನ್ನು ಅನುಸರಿಸಿ, ಅವರು 1969ರಲ್ಲಿ 14 ವಾಣಿಜ್ಯ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿದರು ಮತ್ತು ಹಿಂದಿನ ರಾಜರ “ಖಾಸಗಿ ಕೊಡಿಗೆ ಹಣದ” ಅನುದಾನವನ್ನು ರದ್ದುಗೊಳಿಸಿದರು.. ಪುನರಾವಲೋಕನದಲ್ಲಿ, `ಗರಿಬಿ ಹಟಾವೊ’ ವಾಕ್ಚಾತು ರ್ಯವು ಆಡಂಬರವಿಲ್ಲದ ಮತ್ತು ಸರಳವಾದ ನಿತಿಯಾಗಿ ಕಂಡುಬಂದಿತು. ಆದರೆ ಭಾರತೀಯ ರಾಜಕೀ ಯದಲ್ಲಿ ಮೊದಲ ಬಾರಿಗೆ ಬಡವರ ಕಳವಳಗಳನ್ನು ನೇರವಾಗಿ ಪರಿಹರಿಸಲು ಪ್ರಯತ್ನಿಸಲಾಗಿತ್ತು, ಇದು ಅವರ ಅಧಿಕಾರದ ಬಲವರ್ಧನೆಗೆ ಕಾರಣವಾಯಿತು. 1955ರಲ್ಲಿ ಕಾಂಗ್ರೆಸ್ ಪಕ್ಷದ ಕೇಂದ್ರೀಯ ಚುನಾವಣೆ ಮತ್ತು ಕಾರ್ಯಕಾರಿಣಿ ಸಮಿತಿಗೆ ಸದಸ್ಯರಾದರು. 1958ರಲ್ಲಿ ಕಾಂಗ್ರೆಸ್‍ನ ಕೇಂದ್ರೀಯ ಸಂಸದೀಯ ಮಂಡಳಿಗೆ ಸದಸ್ಯೆಯಾಗಿ ನೇಮಕಗೊಂಡರು. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಏಕೀಕರಣ ಸಮಿತಿ ಅಧ್ಯಕ್ಷೆಯಾದರು. 1956ರಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆಯಾದರು.
1959ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆಯಾಗಿ 1960ರವರೆಗೆ ಸೇವೆ ಸಲ್ಲಿಸಿದರು. ಪುನಃ 1978ರಲ್ಲಿ ಇದೇ ಹುದ್ದೆಗೆ ನೇಮಕಗೊಂಡರು.1964-1966 ವರೆಗೆ ವಾರ್ತಾ ಮತ್ತು ಪ್ರಸಾರ ಸಚಿವೆಯಾಗಿದ್ದರು. ಜನವರಿ 1966ರಿಂದ ಮಾರ್ಚ್ 1977ರವರೆಗೆ ಭಾರತದ ಪ್ರಧಾನಮಂತ್ರಿಯಾಗಿ ಅತ್ಯುನ್ನತ ಹುದ್ದೆಯನ್ನು ನಿರ್ವಹಿಸಿದರು. ಸೆಪ್ಟೆಂಬರ್ 1967ರಿಂದ ಮಾರ್ಚ್ 1977ರವರೆಗೆ ಪರಮಾಣು ಶಕ್ತಿ ಖಾತೆಯ ಸಚಿವರಾಗಿದ್ದರು. ಸೆಪ್ಟೆಂಬರ್ 5, 1967ರಿಂದ ಫೆಬ್ರವರಿ 14, 1969ರವರೆಗೆ ವಿದೇಶಾಂಗ ಸಚಿವಾಲಯದ ಹೆಚ್ಚುವರಿ ಹೊಣೆಯನ್ನೂ ಹೊತ್ತರು. ಜೂನ್ 1970ರಿಂದ ನವೆಂಬರ್ 1973ರವರೆಗೆ ಗೃಹ ಸಚಿವಾಲಯದ ನೇತೃತ್ವವನ್ನು ಶ್ರೀಮತಿ. ಗಾಂಧಿ ವಹಿಸಿಕೊಂಡಿದ್ದರು. ಜೂನ್ 1972ರಿಂದ 1977 ಮಾರ್ಚ್ ತಿಂಗಳವರೆಗೆ ಬಾಹ್ಯಾಕಾಶ ಖಾತೆಯ ಸಚಿವೆಯಾಗಿದ್ದರು.ಜನವರಿ 1980ರಿಂದ ಅವರು ಯೋಜನಾ ಆಯೋಗದ ಅಧ್ಯಕ್ಷೆಯಾಗಿದ್ದರು. ಜನವರಿ 14, 1980ಕ್ಕೆ ಮತ್ತೆ ಪ್ರಧಾನ ಮಂತ್ರಿ ಯಾದರು ಎಂದರು.
ಡಿಸಿಸಿ ಜಿಲ್ಲಾಧ್ಯಕ್ಷರಾದ ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಮೈಲಾರಪ್ಪ, ನೇತಾಜ್ ಓಬಿಸಿ ಅಧ್ಯಕ್ಷ ಎನ್,ಡಿ.ಕುಮಾರ್, ಆಶಾರಾಣಿ, ಮಂಜುನಾಥ್, ರೇಣುಕಾ ಸೇವಾದಳದ ನೇತ್ರಾವತಿ ಸೇರಿದಂತೆ ಇತರರು ಭಾಗವಹಿಸಿದ್ದರು.
———————————————————-
ಮಹಾತ್ಮ ಪುಲೆ ಅಧ್ಯಯನ ಕೇಂದ್ರದಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೋಚಿಂಗ್ ಸೇವೆ
ಚಿತ್ರದುರ್ಗ: ಮಹಾತ್ಮ ಪುಲೆ ಅಧ್ಯಯನ ಕೇಂದ್ರದಲ್ಲಿ ಎಲ್ಲಾ ವರ್ಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ KEA, KAS, KSP, Group C ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಮತ್ತು ರಿಯಾಯಿತಿಯಲ್ಲಿ ತರಬೇತಿಯನ್ನು ನೀಡಲಾಗುವದು.
ಚಿತ್ರದುರ್ಗ ನಗರದ ಸರಸ್ಪತಿಪುರಂ ಬಡಾವಣೆಯಲ್ಲಿನ ಮಹಾತ್ಮ ಅಧ್ಯಯನ ಕೇಂದ್ರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿಯನ್ನು ನೀಡಲಾಗುವುದು, ಈ ವರ್ಷದ ನಾಲ್ಕನೇ ಬ್ಯಾಚನ್ನು ಡಿಸೆಂಬರ್ ಮೊದಲನೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ.
ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬೋಧನಾ ಅವಧಿಯನ್ನು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಮತ್ತು ಪದವಿ ಪೂರೈಸಿದ ಅಭ್ಯರ್ಥಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಿಗದಿಪಡಿಸಲಾಗಿದೆ.
ಕೇಂದ್ರವುಸುಸಜ್ಜಿತವಾದ ಗ್ರಂಥಾಲಯ, ನುರಿತ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುವುದು. ಈ ಕೇಂದ್ರದಲ್ಲಿ ಪ್ರತಿ ಭಾನುವಾರ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡಿ ಅಣಕು ಪರೀಕ್ಷೆಗಳನ್ನು ನಡೆಸಿ ಪರೀಕ್ಷೆಗೆ ಸಜ್ಜುಗೊಳಿಸಲಾಗುತ್ತದೆ ಆಸಕ್ತರು ಖುದ್ದಾಗಿ ಅಥವಾ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. (Apply through online link https://forms.gle/8bjR3hMKSNgDmnwG8) ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9242843504, 9740108588, 9972446430

