ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಸೆ. 13 : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಕಳೆದ 18 ವರ್ಷಗಳಿಂದ ನಡೆಯುತ್ತಿರುವ ಹಿಂದೂ ಮಹಾಗಣಪತಿಯ ಮಹೋತ್ಸವವೂ ಈ ಸಾಲಿನಲ್ಲಿ ಸೆ. 14ರ ಸೋಮವಾರ ಬೆಳಿಗ್ಗೆ 9.18 ರಿಂದ 10.45ರ ಸಮಯದಲ್ಲಿ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ್ ತಿಳಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಪ್ರತಿವರ್ಷ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ `ಹಿಂದೂ ಮಹಾಗಣಪತಿ ಮಹೋತ್ಸವ’ದ ಅಂಗವಾಗಿ ಈ ಬಾರಿಯ ನೂತನ ಉತ್ಸವ ಸಮಿತಿಯನ್ನು ಘೋಷಿಸಲಾಗಿದೆ. ಸೆ 14ರಂದು ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ಅಕ್ಟೋಬರ್ 3ರಂದು ವೈಭವದ ಶೋಭಾಯಾತ್ರೆ ನಡೆಯಲಿದೆ ಕಳೆದ 18 ವರ್ಷಗಳಿಂದ ಚಿತ್ರದುರ್ಗದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದವತಿಯಿಂದ ಹಿಂದೂ ಮಹಾ ಗಣಪತಿಯನ್ನು ಸ್ಥಾಪನೆ ಮಾಡಿ ಪೂಜೆ ಹಾಗೂ ಶೋಭಾಯಾತ್ರೆಯನ್ನು ನಡೆಸಲಾಗುತ್ತಿದೆ ಎಂದರು.
ಆಗಸ್ಟ್ 26 ಬುಧವಾರ ಬೆಳಿಗ್ಗೆ ಗೋಪೂಜೆ ಹಾಗೂ ಧ್ವಜಪೂಜೆ ನಾಡಿನ ವಿವಿಧ ಮಠಾಧೀಶರ ಚುನಾಯುತ ಪ್ರತಿನಿಧಿಗಳ ಸಮ್ಮುಖದಲ್ಲಿ ನೆರವೇರಿದ್ದು, ಸೆ. 9 ರಂದು ಹಿಂದೂ ಮಹಾ ಗಣಪತಿಯ ಪುರಪ್ರವೇಶ ಕಾರ್ಯಕ್ರಮ ನಡೆಸಲಾಯಿತು. ಸೆ. 14ರ ಸೋಮವಾರ: ಬೆಳಿಗ್ಗೆ 9:18 ರಿಂದ 10:45ರ ಶುಭ ಮುಹೂರ್ತದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ನೆರವೇರಲಿದೆ. ಅಕ್ಟೋಬರ್ 3: ಅತ್ಯಂತ ವಿಜೃಂಭಣೆಯ ಶೋಭಾಯಾತ್ರೆ ಮತ್ತು ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ. ಚಿತ್ರದುರ್ಗ ಜಿಲ್ಲೆಯ ಕೇಂದ್ರಸ್ಥಾನ ಮಾತ್ರವಲ್ಲದೆ ಚಳ್ಳಕೆರೆ, ಹೊಳಲ್ಕೆರೆ, ಹಿರಿಯೂರು ಹಾಗೂ ಹೊಸದುರ್ಗ ಭರಮಸಾಗರ ಸೇರಿದಂತೆ ಎಲ್ಲಾ ತಾಲೂಕುಗಳಲ್ಲೂ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಸಹಯೋಗದಲ್ಲಿ ಹಿಂದೂ ಮಹಾಗಣಪತಿ ಉತ್ಸವ ನಡೆಯಲಿದೆ. ಈ ತಾಲೂಕುಗಳ ಶೋಭಾಯಾತ್ರೆಗಳು ಚಿತ್ರದುರ್ಗದ ಮುಖ್ಯ ಶೋಭಾಯಾತ್ರೆಗಿಂತ ಮುಂಚಿತವಾಗಿಯೇ ಮುಕ್ತಾಯಗೊಳ್ಳಲಿವೆ.ದೇಶದ ಎರಡನೇ ಅತಿ ದೊಡ್ಡ ಹಿಂದೂ ಮಹಾಗಣಪತಿ ಉತ್ಸವ ಎಂದೇ ಹೆಸರು ಪಡೆದಿರುವ ಈ ಕಾರ್ಯಕ್ರಮವನ್ನು ಕಳೆದ 19 ವರ್ಷಗಳಿಂದ ಅತ್ಯಂತ ವೈಭವದಿಂದ ನಡೆಸಿಕೊಂಡು ಬರಲಾಗುತ್ತಿದೆ ಎಂದರು.
ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಭಕ್ತಾಧಿಗಳು ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಚನ್ನಕೇಶವ್ ಮನವಿ ಮಾಡಿದ್ದಾರೆ.














