ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 21 : ಸರ್ವ ರೋಗ ನಿವಾರಣೆಗೂ ಯೋಗ ರಾಮಬಾಣವಿದ್ದಂತೆ ಎಂದು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ಹೇಳಿದರು.
ಬಾಪೂಜಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಗಾಟಿಸಿ ಮಾತನಾಡಿದರು.
ಯೋಗ ಜೂ.21 ಕ್ಕೆ ಮಾತ್ರ ಸೀಮಿತವಾಗಬಾರದು. ಪ್ರತಿದಿನವೂ ಸ್ವಲ್ಪ ಸಮಯವನ್ನು ಯೋಗಕ್ಕೆ ಮೀಸಲಿಟ್ಟಾಗ ಮಾತ್ರ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.
ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ನಿರ್ದೇಶಕ ಕೆ.ಎಂ.ಚೇತನ್ ಮಾತನಾಡಿ ಚಿಕ್ಕಂದಿನಿಂದಲೇ ಮಕ್ಕಳಿಗೆ ಯೋಗ, ಧ್ಯಾನ, ಪ್ರಾಣಾಯಾಮದ ಮಹತ್ವವನ್ನು ತಿಳಿಸಬೇಕು. ವಿಜ್ಞಾನ-ತಂತ್ರಜ್ಞಾನದಲ್ಲಿ ಒತ್ತಡದ ಜೀವನದಲ್ಲಿ ಬದುಕುತ್ತಿರುವ ಎಲ್ಲರಿಗೂ ಯೋಗ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಸಂಸ್ಥೆಯ ಮುಖ್ಯಸ್ಥರಾದ ಮೇಘನ ಚೇತನ್, ದೈಹಿಕ ಶಿಕ್ಷಕ ಕೆ.ಎಂ.ಮಲ್ಲಿಕಾರ್ಜುನ್, ಯೋಗಪಟು ಸುನಿಲ್‍ಕುಮಾರ್, ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಶಿಕ್ಷಕ ವೃಂದದವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.