Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

---Advertisement---

ಸುದ್ದಿಒನ್, ಜೂನ್. 21 : ನಗರದ ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಅಧ್ಯಕ್ಷರಾದ ರೋಟೇರಿಯನ್ ಪಿ.ಎಚ್. ಎಫ್ ಎಂ.ಕೆ ರವೀಂದ್ರ ರವರು ವಹಿಸಿಕೊಂಡಿದ್ದರು.
ಮಕ್ಕಳಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳನ್ನು ಕೋರುತ್ತ  ಯೋಗದ ಮಹತ್ವತೆಯನ್ನು ತಿಳಿಸಿಕೊಟ್ಟರು.
ಚೇತನ್ ಬಾಬು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಶಾಲೆಯ ಟ್ರಸ್ಟಿ ರಂಗನಾಥ್ ರವರು ಶಾಲಾ ಮಕ್ಕಳಿಗೆ ಓಂಕಾರದೊಂದಿಗೆ ಯೋಗವನ್ನು ಪ್ರಾರಂಭಿಸಿ ಸೂರ್ಯ ನಮಸ್ಕಾರ ಮತ್ತು ಇತರೆ ಯೋಗಾಸನಗಳನ್ನು ಮಾಡಿಸಿದರು.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳಿಗೆ ಕಾರ್ಯದರ್ಶಿ ಕಾರ್ತಿಕ್ ಎಂ.
ಸ್ವಾಗತಿಸಿದರು.

ಈ ಶಾಲೆಯ ಟ್ರಸ್ಟಿಗಳಾದ ರೋಟೆರಿಯನ್ ಪಿ. ಹೆಚ್. ಎಫ್. ಡಾ.ಮಧುಸೂದನ್ ರೆಡ್ಡಿ, ಶ್ರೀಮತಿ ಸ್ವಾತಿ ಆನಂದ್, ಖಜಾಂಚಿಗಳಾದ ಶ್ರೀಮತಿ ಡಾ. ಶ್ವೇತಾ ಕಾರ್ತಿಕ್ ಉಪಸ್ಥಿತರಿದ್ದರು. ಯೋಗ ಕಾರ್ಯಕ್ರಮದ ನಂತರ ಮಕ್ಕಳಿಗೆ ಸಿಹಿಯನ್ನು ವಿತರಿಸಲಾಯಿತು‌.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...