ಚಿತ್ರದುರ್ಗ.ಸೆಪ್ಟೆಂಬರ್.16: ಜಿಲ್ಲೆಯ ಹನುಮಂತನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿಗೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಮುಖ್ಯಮಂತ್ರಿಗಳ ಕಚೇರಿಯು ತಕ್ಷಣವೇ ಸ್ಪಂದಿಸಿದ್ದು,ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ₹32.24 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆಯಾಗಿದೆ.
ಶಾಲಾ ಕೊಠಡಿಗಳು ಸಂಪೂರ್ಣ ಶಿಥಿಲಗೊಂಡಿದ್ದು, ಮೂಲಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ನಿತ್ಯ ತೊಂದರೆ ಅನುಭವಿಸುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳ ಕಚೇರಿಯು, ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿತ್ತು.
ಚಿತ್ರದುರ್ಗ ಜಿಲ್ಲೆಯ ಹನುಮಂತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳು ಶಿಥಿಲಗೊಂಡು, ಮೂಲಸೌಕರ್ಯಗಳ ಕೊರತೆಯಿಂದ ಮಕ್ಕಳು ಪರದಾಡುತ್ತಿರುವ ಕುರಿತು ಪತ್ರಿಕೆಯಲ್ಲಿ ವರದಿಯಾಗಿತ್ತು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ತಕ್ಷಣವೇ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳ ಕಚೇರಿಯು, ಸ್ಥಳ ಪರಿಶೀಲಿಸಿ ಅಗತ್ಯ ಕ್ರಮ… pic.twitter.com/ELzKXxHM77
— DIPR Karnataka (@KarnatakaVarthe) September 16, 2026
ಸಿಎಂ ಕಚೇರಿಯ ಸೂಚನೆಯ ಮೇರೆಗೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚುವರಿ ಕೊಠಡಿ, ಮೇಜರ್ ದುರಸ್ತಿ, ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ₹32.24 ಲಕ್ಷ ವೆಚ್ಚದ ಕಾಮಗಾರಿಗೆ ಕ್ರಮವಹಿಸಿ ಸಮಸ್ಯೆಗೆ ಪರಿಹಾರ ಒದಗಿಸಿದ್ದಾರೆ.












