ಸುದ್ದಿಒನ್, ಚಿತ್ರದುರ್ಗ, ಜುಲೈ. 10 : ಬಸವೇಶ್ವರ ನಗರದ ನಿವಾಸಿಯಾದ ಜಗದೀಶ್ (44 ವರ್ಷ) ಅವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ಸ್ವ ಗ್ರಾಮ ಮಲ್ಲಾಪುರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
