ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ನಗರದ ಕೆಳಗೋಟೆ ನಿವಾಸಿ ಗೌಡರ ವಂಶಸ್ಥರಾದ ದಿವಂಗತ ಗೌಡ್ರು ಜಯಣ್ಣ ರವರ ಧರ್ಮಪತ್ನಿ ಶ್ರೀಮತಿ ಏನ್.ಜಯಮ್ಮ (75 ವರ್ಷ) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಹೃದಯಘಾತ ದಿಂದ ನಿಧನರಾದರು.
ಮೃತರು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಗರದ ಜೋಗಿಮಟ್ಟಿ ರಸ್ತೆ ಯ ವೀರಶೈವ ರುದ್ರ ಭೂಮಿಯಲ್ಲಿ ನಾಳೆ (ಜುಲೈ. 21 ರ ಸೋಮುವಾರ) ಮದ್ಯಾಹ್ನ 1ಘಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ವೀರಶೈವ ಸಮಾಜದ ಮುಖಂಡರಾದ ನಾಗರಾಜ್ ಸಂಗಮ್ ರವರು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ಸಂತಾಪ ಸೂಚಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











