ಚಿತ್ರದುರ್ಗ | ಆಗಸ್ಟ್ 25 ರಂದು ಉದ್ಯೋಗ ಮೇಳ

suddionenews
1 Min Read

ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಆಗಸ್ಟ್ 22) : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇದೇ ಆಗಸ್ಟ್ 25ರ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಉದ್ಯೋಗ ಮೇಳದಲ್ಲಿ ಸುಮಾರು ಹತ್ತುಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು  18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ., ಬಿಕಾಂ, ಬಿ.ಎಸ್ಸಿ ಮತ್ತು ಇತರೆ ಪದವೀಧರರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಅಗತ್ಯ ದಾಖಲೆಗಳು: ಬಯೋಡಾಟಾ 6 ಪ್ರತಿ,  ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋಸ್, ಆಧಾರ್ ಕಾರ್ಡ್ ಇರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಮತ್ತು ದೂರವಾಣಿ ಸಂಖ್ಯೆ 8105619020, 8310785143, 9945587060ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

Share This Article
Leave a Comment

Leave a Reply

Your email address will not be published. Required fields are marked *