Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಫೆ.01ರಂದು ಉದ್ಯೋಗ ಮೇಳ

---Advertisement---

 

ಚಿತ್ರದುರ್ಗ. ಜ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಸಂಯುಕ್ತಾಶ್ರಯದಲ್ಲಿ ಫೆ.01ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ “ಉದ್ಯೋಗ ಮೇಳ” ಆಯೋಜಿಸಲಾಗಿದೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣ ಪ್ರಕಾಶ ರುದ್ರಪ್ಪ ಪಾಟೀಲ, ಚಳ್ಳಕೆರೆ ಶಾಸಕರು ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು.

 

ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷೆ ಶಿವಕಾಂತಮ್ಮ (ಕಾಂತಾ) ನಾಯ್ಕ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಮ್ಲಾನ್ ಆದಿತ್ಯ ಬಿಸ್ವಾಸ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕ ಆರ್.ಸ್ನೇಹಲ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now