Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸರ್ಕಾರಿ ನೌಕರರ ಸಂಘದ ಮತದಾರರ ಪಟ್ಟಿ ಆಕ್ಷೇಪಣೆ ಸಲ್ಲಿಕೆಗೆ ಜು.10 ಕೊನೆಯ ದಿನ..!

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ನಿರ್ಣಯದಂತೆ ಚಿತ್ರದುರ್ಗ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ 2024ರಿಂದ 2029 ಸಾಲಿನ ಅವಧಿಯ ಎಲ್ಲಾ ಹಂತದ ಚುನಾವಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸಂಘದ ಬೈಲಾ ನಿಯಮ 47ರ ಪ್ರಕಾರ ಕರಡು ಮತದಾರರ ಪಟ್ಟಿಯನ್ನು ಎಲ್ಲಾ ಇಲಾಖೆಗಳಿಂದ ಪಡೆದು ಕರಡು ಮತದಾರರ ಪಟ್ಟಿಯನ್ನು ಜಿಲ್ಲಾ ಶಾಖೆ ಚಿತ್ರದುರ್ಗ ನೌಕರರ ಭವನದ ಸೂಚನಾ ಫಲಕದಲ್ಲಿ ಜುಲೈ 1 ರಂದು ಪ್ರಕಟಿಸಲಾಗಿದೆ.

ಈ ಮತದಾರರ ಪಟ್ಟಿಯಲ್ಲಿ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಜುಲೈ 10ರೊಳಗೆ ಸಂಬಂಧಿಸಿದ ಸದಸ್ಯರು ಸಂಘಕ್ಕೆ ಖುದ್ದು ಬಂದು ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಚಿತ್ರದುರ್ಗದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ತಿಳಿಸಿದೆ.

ಸಂಘದ ಬೈಲಾ ನಿಯಮದನ್ವಯ ಅರ್ಹರಿರುವ ಸಂಘದ ಸದಸ್ಯರ ಹೆಸರುಗಳನ್ನೊಳಗೊಂಡ ಕರಡು ಮತದಾರರ ಪಟ್ಟಿಯನ್ನು ನಿಗಧಿತ ದಿನಾಂಕದೊಳಗೆ ಸಿದ್ದಪಡಿಸಿ ಹೊರಡಿಸಲಾದ ಮತದಾರರ ಪಟ್ಟಿಯನ್ನು ರಾಜ್ಯಸಂಘಕ್ಕೆ ಸಲ್ಲಿಸಲು ಸೂಚಿಸಲಾಗಿದೆ. ಮತ್ತು ಕರಡು ಮತದಾರರ ಪಟ್ಟಿ ಹೊರಡಿಸಿದ ನಂತರ ಸಂಗದ ಸದಸ್ಯರಿಂದ ಮನವಿ, ಆಕ್ಷೇಪಣೆಗಳಿಗೆ ಮುಕ್ತ ಅವಕಾಶ ನೀಡುವುದು ಹಾಗೂ ಈ ಕುರಿತು ವ್ಯಾಪಕ ಪ್ರಚಾರ ನಡೆಸಲು ಸೂಚಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment