Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಕೆ. ಅನ್ವರ್ ಭಾಷಾ ರಾಜ್ಯ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷರಾಗಿ ನಿಯೋಜನೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆ. 04 : ರಾಜ್ಯ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷ ಸ್ಥಾನಕ್ಕೆ ನಮ್ಮ ಜಿಲ್ಲೆಯವರೇ ಆದ ಕೆ. ಅನ್ವರ್ ಬಾಷ ಅವರು ನಿಯೋಜಿತಗೊಂಡಿದ್ದಾರೆ. ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು.

ಸೋಮವಾರ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್ ಕಚೇರಿಯಲ್ಲಿ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅನ್ವರ್ ಬಾಷ ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಅನ್ವರ್ ಬಾಷ, ವೃತ್ತಿಯಲ್ಲಿ ಗುತ್ತಿಗೆದಾರರು. ನಗರದ ಪ್ರತಿಷ್ಠಿತ ವೆಸ್ಟ್ರನ್ ಹಿಲ್ಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ. 2020ರಲ್ಲಿ ವಕ್ಫ್ ಬೋರ್ಡ್‍ಗೆ ನಡೆದ ಚುನಾವಣೆಯಲ್ಲಿ ಮೊದಲ ಬಾರಿ ಚುನಾಯಿತರಾಗಿದ್ದರು.  ಮೂರು ಬಾರಿ ಚಿತ್ರದುರ್ಗ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ಅನ್ವರ್ ಬಾಷ ಅವರಿಗೆ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್, ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್, ರಾಜ್ಯಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಸೈಯದ್ ನಾಸಿರ್ ಹುಸೇನ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ತನ್ವೀರ್ ಸೇಠ್, ಎನ್.ಎ.ಹಾರಿಸ್, ರಿಝ್ವಾನ್ ಅರ್ಶದ್ ಸೇರಿದಂತೆ ಇನ್ನಿತರರು ಅಭಿನಂದನೆ ಸಲ್ಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!