ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್.25 : ನಗರ ಪೊಲೀಸ್ ರಾಣೆ ಆವರಣದಲ್ಲಿರುವ ಕಣಿವೆ ಮಾರಮ್ಮನ ಜಾತ್ರೆ ಮಾ.26 ರ ಇಂದಿನಿಂದ ಆರಂಭಗೊಂಡು 29 ರವರೆಗೆ ನಾಲ್ಕು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ. ದೇವಸ್ಥಾನದ ಮುಂಭಾಗ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.
26 ರಂದು ಸಂಜೆ 6-30 ಕ್ಕೆ ಮಧುವಣಗಿತ್ತಿ ಶಾಸ್ತ್ರ, 28 ರಂದು ಬೆಳಿಗ್ಗೆ 11 ಕ್ಕೆ ಹೂವಿನ ಅಲಂಕಾರ, ಸಕಲ ವಾದ್ಯಗಳೊಂದಿಗೆ ನಗರದ ರಾಜಬೀದಿಗಳಲ್ಲಿ ಅಮ್ಮನ ಮೆರವಣಿಗೆ. 29 ರಂದು ಜಾತ್ರೆಯ ಅಂಗವಾಗಿ ವಿಶೇಷ ಪೂಜೆ, ಬೆಳಿಗ್ಗೆ 11 ಕ್ಕೆ ಅನ್ನಸಂತರ್ಪಣೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಣಿವೆ ಮಾರಮ್ಮನ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಭಕ್ತ ಮಂಡಳಿ ಕೋರಿದೆ.
ಜಾತ್ರಾ ಮಹೋತ್ಸವಕ್ಕೆ ಅಕ್ಕಿ, ಬೇಳೆ, ಬೆಲ್ಲ, ಎಣ್ಣೆ, ಧವಸ ಧಾನ್ಯಗಳನ್ನು ಕೊಡಲಿಚ್ಚಿಸುವ ಭಕ್ತಾಧಿಗಳು ಮಂಗಳವಾರದೊಳಗೆ ದೇವಸ್ಥಾನದ ಸನ್ನಿಧಿಯಲ್ಲಿ ಸಮರ್ಪಿಸಿ ರಸೀದಿಯನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಮೊ : 8951555830, 9448728083, 9480803146 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















