Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ರೈತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 15 : ರಾಜ್ಯ ಸರ್ಕಾರ ಕೃಷಿ ಪಂಪ್‍ಸೆಟ್‍ಗಳಿಗೆ ಸ್ಮಾರ್ಟ್‍ಕಾರ್ಡ್, ಡಿಜಿಟಲ್ ಮೀಟರ್ ಅಳವಡಿಸಲು ಹತ್ತು ಸಾವಿರ ರೂ.ಗಳ ಶುಲ್ಕ ನಿಗಧಿಪಡಿಸಿರುವುದನ್ನು ವಿರೋಧಿಸಿ ತಿಪ್ಪಜ್ಜಿ ಸರ್ಕಲ್ ಸಮೀಪವಿರುವ ಬೆಸ್ಕಾಂ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಗುರುವಾರ ಪ್ರತಿಭಟನೆ ನಡೆಸಿ ಕಾರ್ಯಪಾಲಕ ಇಂಜಿನಿಯರ್‍ಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಇಂಧನ ಸಚಿವರ ಅಣಕು ಶವಯಾತ್ರೆ ಮೂಲಕ ಬೆಸ್ಕಾಂಗೆ ಆಗಮಿಸಿದ ರೈತರು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ವಿದ್ಯುತ್ ಕ್ಷೇತ್ರವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಖಾಸಗಿಕರಣಗೊಳಿಸಲು ನಡೆಸುತ್ತಿರುವ ಹುನ್ನಾರ ನಿಲ್ಲಬೇಕು. ಅಕ್ರಮ-ಸಕ್ರಮ ಅಡಿಯಲ್ಲಿ ರೈತರಿಗೆ ಈ ಹಿಂದೆ ವಿದ್ಯುತ್ ಪರಿಕರಗಳನ್ನು ನೀಡಿದಂತೆ ಉಚಿತ ವಿದ್ಯುತ್ ಕಲ್ಪಿಸಬೇಕು. ವಿದ್ಯುತ್ ಸಂಪರ್ಕಕ್ಕೆ ರೈತರ ಆಧಾರ್ ಜೋಡಣೆ ಮಾಡುವುದನ್ನು ಕೈಬಿಡಬೇಕು.

ಸರ್ಕಾರ ಟಿ.ಸಿ.ಗಳನ್ನು ಮಾತ್ರ ನೀಡುತ್ತಿದ್ದು, ಕಂಬ ಮತ್ತು ವೈರ್‍ಗಳನ್ನು ರೈತರೆ ಸ್ವಂತ ಖರ್ಚಿನಿಂದ ಜೋಡಿಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿ ಸರ್ಕಾರವೇ ವಿತರಿಸಬೇಕು. ಜಮೀನಿನಲ್ಲಿ ವಾಸವಾಗಿರುವ ರೈತರಿಗೆ, ವಿದ್ಯಾರ್ಥಿಗಳಿಗೆ, ಹೈನುಗಾರಿಕೆ ನಡೆಸುವವರಿಗೆ ಸಂಜೆ ಆರು ಗಂಟೆಯಿಂದ ಬೆಳಿಗ್ಗೆ 6 ಗಂಟೆತನಕ ಸಮರ್ಪಕ ವಿದ್ಯುತ್ ನೀಡಬೇಕು. 11 ಕೆ.ವಿ. ಮತ್ತು ಎಲ್.ಟಿ.ಲೈನ್‍ಗಳಲ್ಲಿ ಹದಿನೈದು ವರ್ಷಗಳಿಂದ ಬೆಳೆದಿರುವ ಗಿಡ ಮರಗಳಿಂದಾಗಿ ಕರೆಂಟ್ ತಾಗಿ ಲೈನ್ ವೈರ್‍ಗಳು ಸುಟ್ಟು ಹೋಗುತ್ತಿವೆ. ಕೃಷಿ ಪಂಪ್‍ಸೆಟ್, ಟಿ.ಸಿ.ಮೋಟಾರ್, ಕೇಬಲ್‍ಗಳು ಸುಟ್ಟು ರೈತರು ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಗಿಡ-ಮರಗಳನ್ನು ಕೂಡಲೆ ತೆರವುಗೊಳಿಸುವಂತೆ ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಈ.ಎನ್.ಲಕ್ಷ್ಮಿಕಾಂತ್ ಲಿಂಗಾವರಹಟ್ಟಿ, ತಾಲ್ಲೂಕು ಅಧ್ಯಕ್ಷ ಶಿವಮೂರ್ತಿ, ಮಹಿಳಾಧ್ಯಕ್ಷೆ ಲೋಲಾಕ್ಷಮ್ಮ
ಜಿಲ್ಲಾ ಕಾರ್ಯಾಧ್ಯಕ್ಷ ಓಂಕಾರಪ್ಪ, ಸಿ.ಡಿ.ನಿಲಿಂಗಪ್ಪ, ತಿಪ್ಪೇಸ್ವಾಮಿ, ನಾಗರಾಜ್, ಶ್ರೀನಿವಾಸ್, ರಂಗಸ್ವಾಮಿ, ಜಯಲಕ್ಷ್ಮಿ, ಮಂಜುಳ, ನಾಗರಾಜ್, ರುದ್ರಮುನಿ, ತಿಪ್ಪೇಸ್ವಾಮಿ, ಶಶಿಕಲಾ, ಸೈಯದ್ ಮಮ್ತಾಜ್, ಬಸವರಾಜರೆಡ್ಡಿ, ಮಹೇಶ್ವರಿ, ಮಂಜುನಾಥ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...