ಸುದ್ದಿಒನ್, ಚಿತ್ರದುರ್ಗ, ಏ.14 : ನಗರದ ಎಸ್.ಜೆ.ಎಂ. ಕಾನೂನು ಮಹಾವಿದ್ಯಾಲಯದ ಪ್ರೊ. ಕೆ.ಎನ್. ವಿಶ್ವನಾಥ್ ಅವರ ತಂದೆಯವರಾದ ಕೆ.ಸಿ. ನಿಂಗಪ್ಪನವರು ಇಂದು ಬೆಳಗ್ಗೆ ನಿಧನರಾದರು.
ಚಿತ್ರದುರ್ಗ ಶ್ರೀ ಮುರುಘರಾಜೇಂದ್ರ ಬೃಹನ್ಮಠ ಹಾಗೂ ಶಾಖಾಮಠವಾದ ಹೊಸದುರ್ಗ ಶ್ರೀ ಒಪ್ಪತ್ತಿನಸ್ವಾಮಿ ವಿರಕ್ತಮಠದ ಭಕ್ತರಾಗಿ, ಎರಡೂ ಮಠಗಳ ಸಾಮಾಜಿಕ ಧಾರ್ಮಿಕ ಹಾಗು ಶೈಕ್ಷಣಿಕ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸಿದ್ದರು. ಮೃತರ ಅಗಲಿಕೆಯಿಂದ ಕುಟುಂಬ ವರ್ಗದವರಿಗೆ ಮತ್ತು ಹಿತೈಷಿಗಳಿಗೆ ಆಗಿರುವ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ಕರುಣಿಸಲಿ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ ಹಾಗು ಸದಸ್ಯರಾದ ಡಾ. ಪಿ.ಎಸ್. ಶಂಕರ್, ಡಾ. ಬಸವಕುಮಾರ ಸ್ವಾಮಿಗಳು, ಎನ್.ಎಸ್. ಚಂದ್ರಶೇಖರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಏ.16ರಂದು ಬುಧವಾರ ಅವರ ಸ್ವಗ್ರಾಮ ಕೆಂಕೆರೆಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











