ಸುದ್ದಿಒನ್, ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 50ರ ಮಲ್ಲಾಪುರ ಗೊಲ್ಲರಹಟ್ಟಿ ರಿಂಗ್ ರಸ್ತೆ ಬಳಿ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ KSRTC ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಹೊಸಪೇಟೆಯಿಂದ ಚಿತ್ರದುರ್ಗ ಕಡೆಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್, ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಮುಂಭಾಗದಲ್ಲಿದ್ದ ಲಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಮುಂಭಾಗ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ಐವರು ಪ್ರಯಾಣಿಕರನ್ನು ತಕ್ಷಣವೇ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.











