Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿ.ಜಿ. ಗೋವಿಂದಪ್ಪನವರಿಗೆ ಸಚಿವ ಸ್ಥಾನ ನೀಡಿ : ಚಿತ್ರದುರ್ಗದ ಕುರುಬ ಸಮಾಜ ಮನವಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 05 : ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪನವರಿಗೆ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಂತೆ ಚಿತ್ರದುರ್ಗದ ಕುರುಬ ಸಮಾಜದವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬುಧವಾರ ಮನವಿ ಸಲ್ಲಿಸಿದರು.

 

ಕಾಗಿನೆಲೆ ಕನಕ ಗುರುಪೀಠದ ಆಡಳಿತಾಧಿಕಾರಿಯಾಗಿರುವ ಶಾಸಕ ಬಿ.ಜಿ.ಗೋವಿಂದಪ್ಪನವರಿಗೆ ಸಚಿವ ಸ್ಥಾನ ಕೈತಪ್ಪಿರುವುದು ನಮ್ಮ ಸಮಾಜಕ್ಕೆ ಅತೀವ ನೋವುಂಟು ಮಾಡಿದೆ ಎಂದು ಬಿ.ಕೆ.ಹರಿಪ್ರಸಾದ್‍ರವರಲ್ಲಿ ಅವಲತ್ತುಕೊಂಡರು.

ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಕುರುಬರ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಂ, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಬಿ.ಟಿ.ಜಗದೀಶ್, ಮೃತ್ಯುಂಜಯ
ಪೊಲೀಸ್ ಬಾಬಣ್ಣ, ಶಶಿ ಹೊಳಲ್ಕೆರೆ, ಗಾಡಿ ಮಂಜುನಾಥ್ ಇವರುಗಳು ಈ ಸಂದರ್ಭದಲ್ಲಿದ್ದರು.
ಮನವಿ ಆಲಿಸಿದ ಬಿ.ಕೆ.ಹರಿಪ್ರಸಾದ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಈಗಾಗಲೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ಮುಂದಿನ ದಿನಗಳಲ್ಲಿ ಬಿ.ಜಿ.ಗೋವಿಂದಪ್ಪನವರಿಗೆ ಅವಕಾಶ ಮಾಡಿಕೊಡುವುದಾಗಿ ಭರವಸೆ ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now