ಚಿತ್ರದುರ್ಗ. ಮಾರ್ಚ್31: ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ಅವರು ಜಿಲ್ಲಾ ಲೀಡ್ ಬ್ಯಾಂಕ್‍ನ ವಾರ್ಷಿಕ ಸಾಲ ಗುರಿ ಬಿಡುಗಡೆ ಮಾಡಿದರು.
ಆರ್ಥಿಕ ವರ್ಷ 2026-27ರ ಒಟ್ಟು ಸಾಲ ಗುರಿ 11786.78 ಕೋಟಿಗಳಾಗಿದ್ದು, ಆದ್ಯತಾ ವಲಯಗಳ ಸಾಲದ ಗುರಿ 8967.41 ಕೋಟಿಗಳು ಹಾಗೂ ಆದ್ಯತಾವಲಯವಲ್ಲದ ಸಾಲದ ಗುರಿ 2819.37 ಕೋಟಿಗಳಷ್ಟಿದೆ.
ಈ ಸಂದರ್ಭದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಂ.ರಾಘವೇಂದ್ರ, ನಬಾರ್ಡ್‍ನ ಡಿಡಿಎಂ ವಿನಂತ್, ಎಸ್‍ಬಿಐ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಅಭಿಲಾಶ್, ಕರ್ನಾಟಕ ಗ್ರಾಮೀಣ ಬ್ಯಾಂಕ್‍ನ ಹಿರಿಯ ವ್ಯವಸ್ಥಾಪಕ ಚಕ್ರಪಾಣಿ ಹಾಗೂ ಅಧಿಕಾರಿ ಬಾಲಸಾಗರನ್ ಹಾಗೂ ಲೀಡ್ ಬ್ಯಾಂಕಿನ ಅಧಿಕಾರಿ ಶ್ರೀನಿವಾಸ ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















