ಸುದ್ದಿಒನ್, ಚಿತ್ರದುರ್ಗ, ಜನವರಿ. 16 : ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್‌ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಅವರ ತಾಯಿ ಕೃಷ್ಣಮ್ಮ ಬಿ.ಅನಂತರೆಡ್ಡಿ (90 ವರ್ಷ) ಬುಧವಾರ ನಿಧನ ಹೊಂದಿದರು.
ಮೃತರು ಪುತ್ರ ಬಿ.ಎ. ಲಿಂಗಾರೆಡ್ಡಿ, ನಾಲ್ವರು ಪುತ್ರಿಯರು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ತುರುವನೂರು ರಸ್ತೆಯಲ್ಲಿರುವ ನಿವಾಸದದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಶುಕ್ರವಾರ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3 ಗಂಟೆಗೆ ದೊಡ್ಡಸಿದ್ದವ್ವನಹಳ್ಳಿ ಸಮೀಪದ ಕ್ಯಾದಿಗೆರೆ ಫಾರಂ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ಕಣ್ಣುಗಳನ್ನು ಚಿತ್ರದುರ್ಗ ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್‌ಗೆ ನೇತ್ರದಾನ ಮಾಡಿದ್ದು, ದುಃಖದಲ್ಲೂ ಕಣ್ಣುಗಳನ್ನು ದಾನ ಮಾಡಿದ ಕುಟುಂಬದ ಸದಸ್ಯರ ಕಾರ್ಯಕ್ಕೆ ವೈದ್ಯರು ಪ್ರಶಂಸೆ ವ್ಯಕ್ತಪಡಿಸಿ ಪ್ರಮಾಣ ಪತ್ರ ವಿತರಿಸಿದರು.
ಸಂತಾಪ : ಕೃಷ್ಣಮ್ಮ ಅವರ ನಿಧನಕ್ಕೆ ಶಾಸಕ ವೀರೇಂದ್ರ ಪಪ್ಪಿ ಸೇರಿದಂತೆ ಹಲವು ಪಕ್ಷಗಳ ರಾಜಕೀಯ ಮುಖಂಡರು, ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಖಾಸಗಿ ಬಸ್ ಮಾಲೀಕರ ಸಂಘದ ಸದಸ್ಯರು, ಎಸ್‌ಆರ್‌ಇ ಟ್ರಾವೆಲ್, ಎಸ್‌ಆರ್‌ಇ ಲಾಜಿಸ್ಟಿಕ್ಸ್, ಎಸ್‌ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆಯ, ಪ್ರಾಂಶುಪಾಲರುಗಳು, ಉಪನ್ಯಾಸಕರು, ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












