Connect with us

Hi, what are you looking for?

ಪ್ರಮುಖ ಸುದ್ದಿ

ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಕರೋನಾಕ್ಕೆ ಹೆದರಬೇಕಾ..?; ನಿರ್ಲಕ್ಷ್ಯದ ಎಲ್ಲೇ ಮೀರಿದ ಚಿತ್ರದುರ್ಗದ ಸಭ್ಯ ನಾಗರೀಕರು : ವಿಡಿಯೋ ನೋಡಿ !

ಸುದ್ದಿಒನ್, ಚಿತ್ರದುರ್ಗ, (ಮೇ.23) : ನಾವ್ಯಾರು ಗೊತ್ತಲ್ವಾ…ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಈ ಚೀನಾದ ಕರೋನಾಕ್ಕೆ ಹೆದರಬೇಕಾ..? ಎಂಬ ಉಡಾಫೆಯ ವರ್ತನೆಯನ್ನು ಚಿತ್ರದುರ್ಗದ ನಾಗರೀಕರು ತೋರುತ್ತಿದ್ದಾರೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಹೆಮ್ಮಾರಿ ಅಟ್ಟಹಾಸ ಮೆರೆಯುತ್ತಿದೆ. ಇಡೀ ಜಿಲ್ಲಾಡಳಿತ ಹಗಲಿರುಳೆನ್ನದೆ ಕರೋನಾ ನಿಯಂತ್ರಣಕ್ಕೆ ಅವಿರತವಾಗಿ ಶ್ರಮಿಸುತ್ತಿದೆ. ಕರ್ತವ್ಯದಲ್ಲಿರುವ ಎಲ್ಲ ಹಂತದ ಸಿಬ್ಬಂದಿಗಳು ತಮ್ಮ ಕುಟುಂಬಗಳನ್ನು ಮರೆತು ಗಡಿಯಲ್ಲಿನ ಸೈನಿಕರಂತೆ ಜನರ ಜೀವ ರಕ್ಷಣೆಗೆ ನಿಂತಿದ್ದಾರೆ. ಆದರೆ ಈ ಜನರು ಮಾತ್ರ ಅದು ಅವರ ಕರ್ತವ್ಯ, ಸರ್ಕಾರ ಸಂಬಳ ಕೊಡುತ್ತೇ ಮಾಡುತ್ತೇ ಎಂಬ ನಿರ್ಲಜ್ಜದ ಮಾತುಗಳನ್ನಾಡುತ್ತ ಕೋವಿಡ್ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ.

ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮಾತನ್ನು ಕಾಲುಕಸ ಮಾಡಿಕೊಂಡಿರುವ ಜನತೆ ತಮ್ಮ ಆರೋಗ್ಯ ಹದಗೆಟ್ಟು ಕೊನೆ ಕ್ಷಣಕ್ಕೆ ಆಸ್ಪತ್ರೆಗೆ ಬಂದು ಜೀವ ಉಳಿಸಿ ಎಂದು ವೈದ್ಯರ ಜೀವ ಹಿಂಡುವುದು ಕಳೆದ ಕೆಲ ದಿನಗಳಿಂದ ಸಾಮಾನ್ಯವಾಗಿದೆ ಕಂಡು ಬರುತ್ತಿದೆ.

 

ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಒಂದು ವೇಳೆ ನಿಯಂತ್ರಣ ಕಳೆದು ಕೊಂಡರೆ ಪರಿಸ್ಥಿತಿ ಕೈಮೀರುತ್ತದೆ ಎಂಬದನ್ನು ಅರಿತ ಜಿಲ್ಲಾಡಳಿತ ವಾರಾಂತ್ಯದ ಕಠಿಣ ಲಾಕ್ ಡೌನ್ ಘೋಷಿಸಿದೆ. ಆದರೂ ಜನರಿಗೆ ಯಾವುದು ಅರ್ಥವಾದಂತೆ ಕಾಣುತ್ತಿಲ್ಲ.

ಏನಾದರೊಂದು ಕುಂಟು ನೆಪ ಮಾಡಿಕೊಂಡು ರಸ್ತೆಗಳಿಯುತ್ತಿದ್ದಾರೆ. ಈ ಸಮಯದಲ್ಲಿ ಪೊಲೀಸರು ಬೈಕ್‍ಗಳನ್ನು ತಡೆದು ನಿಲ್ಲಿಸಿದರೆ ನಾನು ಇಂತವರ ಮಗ, ಇಂತವರ ಸಹೋದರ..ಎಂದು ಫೋನ್ ಮಾಡಿ ಕೊಡುವುದನ್ನು ಮಾಡುತ್ತಿದ್ದಾರೆ. ಇದರಿಂದ ಕೋವಿಡ್ ಒಬ್ಬರಿಂದ ಒಬ್ಬರಿಗೆ ಹಬ್ಬುತ್ತಿದೆ.

ಕಳೆದ 13 ದಿನಗಳಿಂದ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಈಗ ಮತ್ತೆ 14 ದಿನಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಿರುವ ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ರೂಲ್ಸ್ ಜಾರಿಗೆ ತಂದಿದೆ. ಆಸ್ಪತ್ರೆಯಲ್ಲಿ ಬೆಡ್ ಸಿಕ್ತಾ ಇಲ್ಲ, ವೈರಸ್ ಜಾಸ್ತಿ ಆಗ್ತಾ ಇದೆ ಅಂದ್ರು ಮನೆಯಲ್ಲಿರದೆ ಬೇಕಾ ಬಿಟ್ಟಿ ಓಡಾಡ್ತಾ ಇದ್ದಾರೆ. ಪೊಲೀಸರು ಕೂಡ ಜನರನ್ನ ನಿಯಂತ್ರಿಸೋದಕ್ಕೆ ಹರಸಾಹಸ ಪಡುವಂತಾಗಿದೆ.

ಇಂದು ಭಾನುವಾರ. ದಿನನಿತ್ಯದ ವಸ್ತು ಖರೀದಿಗೆ ಸಾಕಷ್ಟು ಸಮಯಾವಾಕಾಶ ನೀಡಿದ್ದರೂ ಆದರೂ ಜನರು ವಿನಾಕಾರಣ ರಸ್ತೆಗೆ ಬರುತ್ತಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಕೇವಲ ಸರ್ಕಾರದ ಮೇಲೆ ಮಾತ್ರ ಗೂಬೆ ಕೂರಿಸೋದು ಅಲ್ಲ, ಆ ವೈರಸ್ ತಡೆಗೆ ನಾವೇನು ಮಾಡಬಹುದು, ಏನು ಮಾಡ್ತಾ ಇದ್ದೀವಿ ಅನ್ನೊ ಆಲೋಚನೆ ಮನುಷ್ಯನ ತಲೆಗೆ ಬಂದ್ರೆ ಎಲ್ಲವೂ ಹತೋಟಿಗೆ ಬರಲಿದೆ.

ಅಗತ್ಯ ಸೇವೆಗಳಾದ ವೈದ್ಯಕೀಯ ತುರ್ತು ಸೇವೆಗಳು, ತುರ್ತು ಸೇವೆ ಒದಗಿಸುವ ಇಲಾಖೆಗಳು, ಔಷಧಿ ಅಂಗಡಿಗಳು, ಎಲ್ಲಾ ಆಸ್ಪತ್ರೆ, ಪೆಟ್ರೋಲ್ ಪಂಪ್‍ಗಳು, ಹಾಲಿನ ಬೂತ್‍ಗಳು (ಬೆಳಿಗ್ಗೆ 6 ರಿಂದ 10 ರವರೆಗೆ ಮಾತ್ರ) ಸರ್ಕಾರಿ ವಾಹನಗಳ ಓಡಾಟ, ಅಗತ್ಯ ಸೇವೆಗಳ ಇಲಾಖೆಯ ಸಿಬ್ಬಂದಿ ಓಡಾಟ, ಈಗಾಗಲೇ ಅನುಮತಿ ನೀಡಿರುವ ಕಾರ್ಯಕ್ರಮಗಳು, ದಿನ ಪತ್ರಿಕೆ ವಿತರಣೆ, ಎಲ್ಲಾ ರೀತಿಯ ಸರಕು ಸಾಗಣೆ ವಾಹನಗಳು, ಆಮ್ಲಜನಕ ಸೇವೆಗಳು, ಇ-ಕಾಮರ್ಸ್ ಸೇವೆಗಳು, ಹೋಟೆಲ್‍ಗಳಲ್ಲಿ ತಿಂಡಿ, ಊಟ ಪಾರ್ಸೆಲ್ ಪಡೆಯಲು, ತರಕಾರಿಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸೇವೆಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಚಟುವಟಿಕೆಗಳನ್ನು ನಿರ್ಬಂಧಿಸಿ ಆದೇಶಿಸಿದೆ.

ಈ ಆದೇಶದ ಜೊತೆಯಲ್ಲಿ ಈಗಾಗಲೇ ಸಿ.ಆರ್.ಪಿ.ಸಿ 144 ರಡಿಯಲ್ಲಿ ಹೊರಡಿಸಿರುವ ನಿಷೇಧಾಜ್ಞೆ ಆದೇಶವು ಸಹ ಜಾರಿಯಲ್ಲಿರುತ್ತದೆ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ರಡಿ ಹಾಗೂ ಭಾರತೀಯ ದಂಡ ಸಂಹಿತೆ ಕಲಂ 188 ರಡಿ ಶಿಸ್ತು ಕ್ರಮಕೈಗೊಳ್ಳಲು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.

ವಾರಾಂತ್ಯದ ಕಠಿಣ ಲಾಕ್‍ಡೌನ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ 6ವರೆಗೂ ಮುಂದುವರೆಯಲಿದೆ. ಇಲಾಖೆ ಸಿಬ್ಬಂದಿ ನಿರಂತರವಾಗಿ ಗಸ್ತಿನಲ್ಲಿದ್ದಾರೆ. ಭಾನುವಾರ ಮುಂಜಾನೆ 5 ರಿಂದಲೇ ಕರ್ತವ್ಯಕ್ಕೆ ಹಾಜರಾಗಿದ್ದು, ಜನರ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಆದರೂ ಕೆಲವರು ಅಗತ್ಯ ಸೇವೆಗಳ ಹೆಸರಲ್ಲಿ ಸುತ್ತಾಡುತ್ತಿರುವುದು ಕಂಡು ಬಂದಿದೆ. ಇಲಾಖೆ ಜತೆ ಜನರು ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಸುದ್ದಿಒನ್‍ಗೆ ಎಸ್ಪಿ ಜಿ.ರಾಧಿಕಾ ತಿಳಿಸಿದರು.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!