ಚಿತ್ರದುರ್ಗ ಲೋಕಸಭಾ ಚುನಾವಣೆ | ಈ ಬಾರಿ ಭೋವಿ ಸಮುದಾಯಕ್ಕೆ ಟಿಕೆಟ್ ನೀಡಿ : ತಿಪ್ಪೇಸ್ವಾಮಿ ಒತ್ತಾಯ

2 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 17 :  ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ 2.5 ಲಕ್ಷ ಭೋವಿ ಸಮುದಾಯದ ಮತದಾರರಿದ್ದು, ಇಲ್ಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮನ್ನು ಗುರುತಿಸುವ ಪ್ರಯತ್ನ ಮಾಡಿಲ್ಲ. ಈ ಬಾರಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಭೋವಿ ಸಮುದಾಯಕ್ಕೆ ಟಿಕೆಟ್ ನೀಡುವ ಮುಖಾಂತರ ಸಾಮಾಜಿಕ ನ್ಯಾಯವನ್ನು ಸಿದ್ದರಾಮಯ್ಯನವರು ಒದಗಿಸಬೇಕು ಎಂದು ಬೋವಿ ಸಂಘದ ಅಧ್ಯಕ್ಷರಾದ ತಿಪ್ಪೇಸ್ವಾಮಿ ಪಕ್ಷದ ಮುಖಂಡರನ್ನು ಒತ್ತಾಯಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಲೋಕಸಬಾ ಚುನಾವಣೆಯಲ್ಲಿ ಕಳೆದ 40 ವರ್ಷದ ಹಿಂದೆ ನಮ್ಮ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದವತಿಯಿಂದ ಟೀಕೇಟ್ ನಿಡಲಾಗಿತ್ತು ತದ ನಂತರ ಇಲ್ಲಿಯವರೆಗೂ ಕಾಂಗ್ರೆಸ್ ಪಕ್ಷ ಟೀಕೇಟ್ ನೀಡಿಲ್ಲ ಈಗಾಗಲೇ ಎಡಗೈ ಸಮುದಾಯದವರಿಗೆ ಟಿಕೆಟ್ ನೀಡಲಾಗಿದೆ ಉಳಿದಂತೆ ಲಂಬಾಣಿ ಹಾಗೂ ಭೋವಿ ಸಮುದಾಯಕ್ಕೆ ಟಿಕೆಟ್ ನೀಡಬೇಕು ನಮ್ಮ ಸಮುದಾಯ ಕಾಂಗ್ರೆಸ್ ಪಕ್ಷದ ಜೊತೆಯಲ್ಲಿದೆ.. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ನಮಗೆ 40 ವರ್ಷದಿಂದ ಅನ್ಯಾಯವಾಗಿದೆ.. ನಮ್ಮ ಸಮುದಾಯಕ್ಕೆ ಟಿಕೆಟ್ ನೀಡಿದರೆ ಸಾಮಾಜಿಕ ನ್ಯಾಯ ನೀಡಿದಂತೆ ಆಗುತ್ತದೆ. 28 ಲೋಕಸಭಾ ಕ್ಷೇತ್ರಗಳ ಪೈಕಿ 5 ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಿವೆ ಅದರಲ್ಲಿ ಒಂದು ಕ್ಷೇತ್ರದಲ್ಲಾದರೂ ಭೋವಿ ಸಮುದಾಯಕ್ಕೆ ನೀಡಬೇಕು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಪೈಕಿ 05 ಜನ ಭೋವಿ ಸಮುದಾಯದವರಿದ್ದಾರೆ. ಅದರಂತೆ ನೆರ್ಲಗುಂಟೆ ರಾಮಪ್ಪ ರವರು ಸ್ಥಳೀಯರಾಗಿದ್ದು ಅವರಿಗೆ ಟಿಕೆಟ್ ನೀಡಬೇಕೆಂದು ಪಕ್ಷದ ಮುಖಂಡರಲ್ಲಿ ಮನವಿ ಮಾಡಿದರು.

ಸಮುದಾಯದ ಮುಖಂಡರಾದ ಹೆಚ್.ಅಂಜನೇಯ ಮಾತನಾಡಿ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೋವಿ ಸಮುದಾಯದವರಿಗೆ ಟೀಕೇಟ್ ನೀಡದಿದ್ದರೆ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿಗಳ ಸಮ್ಮುಖದಲ್ಲಿ ಸಭೆಯನ್ನು ನಡೆಸಿ ಮುಂದಿನ ಕ್ರಮ ಕೈಗೊಳಲಾಗುವುದು. ಈ ಬಾರಿಯ ಚುನಾವಣೆಯಲ್ಲಿ ಎರಡು ಪಕ್ಷದಿಂದ ಬೋವಿ ಸಮುದಾಯಕ್ಕೆ ಟೀಕೇಟ್ ನೀಡಿದರೆ ಇದರ ಬಗ್ಗೆ ನಿರ್ಣಯವನ್ನು ಸಮುದಾಯ, ಅಥವಾ ಗುರುಗಳು ಮಾಡದೇ ಮತದಾರರೇ ತೀರ್ಮಾನ ಮಾಡುತ್ತಾರೆ. ಇದರಲ್ಲಿ ನಾವು ಬಾಗಿಯಾಗುವುದಿಲ್ಲ ಎಂದರು.

ಗೋಷ್ಟಿಯಲ್ಲಿ  ಜಿ.ಪಂ. ಮಾಜಿ ಸದಸ್ಯರಾದ ಅನಿಲ್ ಕುಮಾರ್, ತಿಪ್ಪೇಸ್ವಾಮಿ, ಮುಖಂಡರಾದ ಪಿ.ದೇವರಾಜು, ಕನಕದಾಸ್ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *