ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಮಾ. 09 : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ನಿನ್ನೆ ಬಿಡುಗಡೆಯಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರ ಯಾವುದೇ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ. ಈ ನಿಟ್ಟಿನಲ್ಲಿ ಸ್ಥಳೀಯ ಅಭ್ಯರ್ಥಿ ಜೆ ಜೆ ಹಟ್ಟಿ ತಿಪ್ಪೇಸ್ವಾಮಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಜೆಜೆ ಹಟ್ಟಿ ತಿಪ್ಪೇಸ್ವಾಮಿ ಬೆಂಬಲಿಗರು ಪ್ರತಿಭಟನೆ ನಡೆಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.
ನಗರದ ಕಾಂಗ್ರೆಸ್ ಕಚೇರಿ ಬಳಿ ಜಮಾಯಿಸಿದ್ದ
ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜೆ ಜೆ ಹಟ್ಟಿ ತಿಪ್ಪೇಸ್ವಾಮಿ ಅಭಿಮಾನಿಗಳು ಸ್ಥಳೀಯ ಅಭ್ಯರ್ಥಿ ಜೆ ಜೆ ಹಟ್ಟಿ ತಿಪ್ಪೇಸ್ವಾಮಿಗೆ ಕಾಂಗ್ರೆಸ್ ಪಕ್ಷದ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ. ತಾಜ್ ಪೀರ್ ಅವರಿಗೆ ಮನವಿ ಸಲ್ಲಿಸಿದರು.
ಪ್ರವಾಸಿ ಮಂದಿರದಿಂದ ಕಾಂಗ್ರೆಸ್ ಕಚೇರಿಯವರೆಗೂ ಕಾಂಗ್ರೆಸ್ ಕಾರ್ಯಕರ್ತರು ಕೈಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್, ಮತ್ತು ಜೆ.ಜೆ. ಹಟ್ಟಿ ತಿಪ್ಪೇಸ್ವಾಮಿ ಅವರ ಭಾವಚಿತ್ರಗಳನ್ನು ಜೆ ಜೆ ಹಟ್ಟಿ ತಿಪ್ಪೇಸ್ವಾಮಿ ಅವರ ಪರ ಘೋಷಣೆಗಳನ್ನ ಕೂಗುತ್ತಾ ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದರು.
ಕಳೆದ 10 ವರ್ಷಗಳಿಂದ ಹೊರ ಜಿಲ್ಲೆಯವರಿಗೆ ಪಕ್ಷ ಟಿಕೆಟ್ ನೀಡುತ್ತಿದ್ದು ಈ ಬಾರಿ ಸ್ಥಳೀಯ ಆಕಾಂಕ್ಷಿಯಾದ ಡಾ. ಬಿ. ತಿಪ್ಪೇಸ್ವಾಮಿ ಜೆಜೆ ಹಟ್ಟಿ ಅವರಿಗೆ ಟಿಕೆಟ್ ಕೊಡುವಂತೆ ಹೈ ಕಮಾಂಡ್ ಗೆ ನಮ್ಮ ಮನವಿಯನ್ನು ತಲುಪಿಸಬೇಕು. ಈ ಹಿಂದೆ 2009 ರಲ್ಲಿ ತಿಪ್ಪೇಸ್ವಾಮಿ ಯವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತರಾಗಿದ್ದರು. ಅಲ್ಲಿಂದ ಇಲ್ಲಿಯವರೆಗೆ ತಿಪ್ಪೇಸ್ವಾಮಿ ಯವರು ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದಾರೆ. ವಿದ್ಯಾರ್ಥಿ ಕಾಂಗ್ರೆಸ್ಸ್, ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅನೇಕ ಜನಪರ ಹೋರಾಟ ಮಾಡಿ ಪಕ್ಷದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ತಾಲ್ಲೂಕಿನಲ್ಲಿ ಪ್ರತಿಯೊಂದು ಗ್ರಾಮ ಹೋಬಳಿ ಹಾಗೂ ನಗರ ಮಟ್ಟದಲ್ಲಿ ಸಭೆ ಸಮಾರಂಭ ಅನೇಕ ಕಾರ್ಯಕ್ರಮಗಳನ್ನು ಮಾಡಿ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಚಿತ್ರದುರ್ಗದಲ್ಲಿ ಮತದಾರರು ಸ್ಥಳೀಯ ನಾಯಕರ ಆಯ್ಕೆಯಲ್ಲಿ ಬಹಳ ನಿರೀಕ್ಷೆ ಇಟ್ಟಿದ್ದು ಅವರ ಆಶಯಗಳಿಗೆ ಮಾನ್ಯತೆ ನೀಡಿ ಸ್ಥಳೀಯ ನಾಯಕರಿಗೆ ಟಿಕೆಟ್ ಕೊಡಿಸಬೇಕು ಕಳೆದ ಅನೇಕ ವರ್ಷಗಳಿಂದ ಸ್ಥಳೀಯ ನಾಯಕತ್ವಕ್ಕೆ ಜನಾಂದೋಲನ ನಡೆಯುತ್ತಿದ್ದು ಈ ಬಾರಿ ಸ್ಥಳೀಯರಿಗೆ ಟಿಕೆಟ್ ಕೊಟ್ಟು ಈ ಕ್ಷೇತ್ರವನ್ನು ಕಾಂಗ್ರೆಸ್ಸ್ ತೆಕ್ಕೆಗೆ ತೆಗೆದುಕೊಳ್ಳವುತ್ತ ಗಮನ ಹರಿಸಬೇಕೆಂದು ಮನವಿ ಮಾಡಲಾಯಿತು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…