Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

---Advertisement---

ಚಿತ್ರದುರ್ಗ. ಮಾರ್ಚ್. 28: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌

ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನ ಪರಿಶಿಷ್ಟ ಜಾತಿ ಮೀಸಲಾಗಿದೆ. ಚುನಾವಣಾಧಿಕಾರಿಗಳ ಕಾರ್ಯಾಲಯವನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಾಪಿಸಲಾಗಿದೆ.

ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರಿಗೆ ಸಲ್ಲಿಸಬಹುದು.
ಸಾರ್ವತ್ರಿಕ ರಜಾದಿನ ಹೊರತು ಪಡಿಸಿ
ಏಪ್ರಿಲ್ 4 ವರೆಗೆ ಪ್ರತಿದಿನ ಬೆಳಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯವರೆಗೆ ನಾಮಪತ್ರ ಸ್ವೀಕರಿಸಲಾಗುವುದು.

ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ನಾಮಪತ್ರದ ನಮೂನೆಗಳನ್ನು ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ಪಡೆದುಕೊಳ್ಳಬಹುದು.

ಏಪ್ರಿಲ್ 5 ರಂದು ಬೆಳಿಗ್ಗೆ 11.00ಗಂಟೆಗೆ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯುಲು ಇಚ್ಛಿಸಿದ್ದಲ್ಲಿ, ತಿಳಿವಳಿಕೆ ಪತ್ರವನ್ನು ಉಮೇದುವಾರ ಅಥವಾ ಸೂಚಕ ಅಥವಾ ಉಮೇದುವಾರ ನೇಮಿಸಿದ ಏಜೆಂಟ್ ಏಪ್ರಿಲ್ 8 ರಂದು ಮಧ್ಯಾಹ್ನ 3.00 ಗಂಟೆಗೆ ಮುಂಚೆ ಚುನಾವಣಾಧಿಕಾರಿಗೆ ಸಲ್ಲಿಸಬೇಕು.‌ ಏಪ್ರಿಲ್ 26 ರಂದು ಬೆಳಗ್ಗೆ 7.00 ಗಂಟೆಯಿಂದ ಸಂಜೆ 6.00 ಗಂಟೆಯ ವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದ್ದಾರೆ.‌

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment