ಚಿತ್ರದುರ್ಗ ಲೋಕಸಭಾ ಚುನಾವಣೆ | ಏಪ್ರಿಲ್ 01ರಂದು ಐದು ನಾಮಪತ್ರ ಸಲ್ಲಿಕೆ

1 Min Read

 

 

ಚಿತ್ರದುರ್ಗ. ಏ.01:  ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 01 ಸೋಮವಾರದಂದು ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಗೋವಿಂದ ಕಾರಜೋಳ ಅವರು 2 ಬಾರಿ, ಸೋಷಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದಿಂದ ಸುಜಾತ ಡಿ  ಅವರು 2 ಬಾರಿ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನರಸಿಂಹರಾಜು ಸಿ.ಎನ್ ಅವರು 1 ಬಾರಿ ತಮ್ಮ ಉಮೇದುವಾರಿಕೆ ಪತ್ರವನ್ನು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಸಲ್ಲಿಸಿದರು.

ಈಗಾಗಲೇ ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಏಪ್ರಿಲ್ 04 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *