Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಲೋಕಸಭಾ ಚುನಾವಣೆ | ಎಂ.ಸಿ.ರಘುಚಂದನ್‍ಗೆ ಬಿಜೆಪಿಯಿಂದ ಟಿಕೆಟ್ ನೀಡುವಂತೆ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರಗೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್,ಚಿತ್ರದುರ್ಗ, ಮಾರ್ಚ್.05 : ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಯುವ ಉತ್ಸಾಹಿ ಎಂ.ಸಿ.ರಘುಚಂದನ್‍ಗೆ ಬಿಜೆಪಿಯಿಂದ ಟಿಕೆಟ್ ನೀಡುವಂತೆ ಸಹಸ್ರಾರು ಅಭಿಮಾನಿಗಳು ಮಂಗಳವಾರ ಶಿವಮೊಗ್ಗಕ್ಕೆ ತೆರಳಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇವರುಗಳನ್ನು ಒತ್ತಾಯಿಸಿ ಶಕ್ತಿ ಪ್ರದರ್ಶಿಸಿದರು.

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೇ ಸ್ಪರ್ಧಿಸಲು ಉತ್ಸುಕರಾಗಿದ್ದ ಎಂ.ಸಿ.ರಘುಚಂದನ್ ಟಿಕೆಟ್ ಸಿಗಲಿಲ್ಲವೆಂದು ಬೇಸರಪಟ್ಟುಕೊಳ್ಳದೆ ಅಂದಿನಿಂದ ಇಲ್ಲಿಯವರೆಗೂ ಕ್ಷೇತ್ರಾದ್ಯಂತ ಸಂಚರಿಸುತ್ತ ಅಪಾರ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪನವರ ಪುತ್ರರಾಗಿರುವ ಎಂ.ಸಿ.ರಘುಚಂದನ್‍ಗೆ ರಾಜಕೀಯದಲ್ಲಿ ಸಾಕಷ್ಟು ಅನುಭವವಿದ್ದು, ಎಲ್ಲೆಡೆ ಮತದಾರರ ಒಲವಿದೆ. ಕ್ಷೇತ್ರದ ಮತದಾರರ ಕಷ್ಟ-ಸುಖ ಹಾಗೂ ಸಮಸ್ಯೆಗಳನ್ನು ಹತ್ತಿರದಿಂದ ಕಂಡಿದ್ದಾರೆ. ಹಾಗಾಗಿ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಗೆಲುವು ಶತಸಿದ್ದ ಎನ್ನುವ ಅಭಿಪ್ರಾಯವನ್ನು ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ.ವಿಜಯೇಂದ್ರರವರ ಮುಂದೆ ಅಭಿಮಾನಿಗಳು ಭಿನ್ನವಿಸಿಕೊಂಡರು.

ಅಭಿಮಾನಿಗಳನ್ನು ಕಂಡು ಪುಳಕಿತಗೊಂಡು ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಇವರುಗಳು ಎಂ.ಸಿ.ರಘುಚಂದನ್‍ಗೆ ಟಿಕೆಟ್ ಕೊಡಿಸುವ ವಿಚಾರವಾಗಿ ಪಕ್ಷದ ನಾಯಕರುಗಳ ಬಳಿ ಚರ್ಚಿಸುವುದಾಗಿ ಭರವಸೆ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment