Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಲೋಕಸಭಾ ಚುನಾವಣೆ: ಏಪ್ರಿಲ್ 24ರ ಸಂಜೆ 6ಕ್ಕೆ ಬಹಿರಂಗ ಪ್ರಚಾರ ಅಂತ್ಯ : ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

Facebook
Twitter
Telegram
WhatsApp

ಚಿತ್ರದುರ್ಗ.ಏ.22: ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಇದೇ ಏಪ್ರಿಲ್ 26ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಚುನಾವಣಾ ವಿಷಯಗಳ ಕುರಿತು ಅಭ್ಯರ್ಥಿ ಹಾಗೂ ಏಜೆಂಟರೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಮುಕ್ತಾಯಗೊಳಿಸಬೇಕು. ಅಂದರೆ ಇದೇ ಏಪ್ರಿಲ್ 24ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯಗೊಳಿಸಬೇಕು. ಆದರೆ ಅಭ್ಯರ್ಥಿಗಳು ಮಾತ್ರ ಮನೆ ಮನೆ ಪ್ರಚಾರ ಮಾಡಬಹುದಾಗಿದೆ. ಮನೆ ಮನೆ ಮತಯಾಚನೆ ವೇಳೆ 10 ಜನಕ್ಕಿಂತ ಹೆಚ್ಚಿನ ಜನರು ಇರುವಂತಿಲ್ಲ ಎಂದು ಹೇಳಿದರು.

ಮತದಾರರ ಒಲೈಕೆಗಾಗಿ ಮತದಾನದ ಹಿಂದಿನ ದಿನ ಉಚಿತ ಉಡುಗೊರೆ, ಹಣ ಹಂಚಿಕೆ, ಆಮಿಷ ಒಡ್ಡುವುದು ಸೇರಿದಂತೆ ಮತದಾರರಿಗೆ ಮತಗಟ್ಟೆಗಳಿಗೆ ಕರೆದುಕೊಂಡು ಬರಲು ಮತ್ತು ಹೋಗಲು ವಾಹನ ವ್ಯವಸ್ಥೆ, ತಿಂಡಿ, ಊಟದ ವ್ಯವಸ್ಥೆ ಮಾಡತಕ್ಕದ್ದಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

 

ಮತದಾನ ಕೇಂದ್ರದ 200 ಮೀಟರ್ ವ್ಯಾಪ್ತಿಯ ನಂತರ ಚಿಕ್ಕದಾಗಿ ಹೆಲ್ಪ್ ಡೆಸ್ಕ್ ತೆರೆಯಲು ಅವಕಾಶವಿದೆ. ಇದಕ್ಕೆ ಸಂಬಂಧಪಟ್ಟ ಎಆರ್‌ಒ ಅನುಮತಿ ನೀಡಲಿದ್ದು, ಅನುಮತಿ ಪಡೆದು ಹೆಲ್ಪ್ ಡೆಸ್ಕ್ ತೆರೆಯಬೇಕು. ಒಬ್ಬ ಅಭ್ಯರ್ಥಿ ಅಥವಾ ಅಭ್ಯರ್ಥಿ ಪರವಾಗಿರುವ ಏಜೆಂಟ್ ಅವರು ಮೂರು ವಾಹನಗಳ ಬಳಸುವುದಕ್ಕೆ ಮಾತ್ರ ಅವಕಾಶವಿದೆ. ಈ ಮೂರು ವಾಹನಗಳಿಗೆ ಕಡ್ಡಾಯವಾಗಿ ಅನುಮತಿಯನ್ನು ಮೊದಲೇ ಪಡೆದಿರಬೇಕು. ಒಂದು ವಾಹನದಲ್ಲಿ ವಾಹನ ಚಾಲಕರು ಸೇರಿದಂತೆ 4 ಜನರಿಗಿಂತ ಹೆಚ್ಚು ಜನರು ಇರುವಂತಿಲ್ಲ ಎಂದು ಹೇಳಿದರು.

ಆಯಾ ಕ್ಷೇತ್ರದ ಮತದಾರರನ್ನು ಹೊರತುಪಡಿಸಿ, ಉಳಿದವರು ಕ್ಷೇತ್ರ ತೊರೆಯಬೇಕು: ಆಯಾ ಕ್ಷೇತ್ರದ ಮತದಾರರನ್ನು ಹೊರತುಪಡಿಸಿ, ಉಳಿದವರು ಕಡ್ಡಾಯವಾಗಿ ಕ್ಷೇತ್ರವನ್ನು ಹೊಟ್ಟುಹೋಗಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಆಯಾ ಕ್ಷೇತ್ರದ ಮತದಾರರನ್ನು ಹೊರತುಪಡಿಸಿ, ಉಳಿದವರು ಕಡ್ಡಾಯವಾಗಿ ಕ್ಷೇತ್ರ ಬಿಟ್ಟುಹೋಗಬೇಕು. ಕ್ಷೇತ್ರದ ಮತದಾರರಲ್ಲದವರು ಯಾವುದೇ ಲಾಡ್ಜ್, ಹೋಟೆಲ್, ಕಲ್ಯಾಣ ಮಂಟಪ, ಮನೆ ಸೇರಿದಂತೆ ಇತರೆ ಕಡೆ ವಾಸ್ತವ್ಯ ಮಾಡಿದಲ್ಲಿ ಅಂತಹವರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಯಲು ಸಹಕರಿಸಬೇಕು ಎಂದು ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರು ಅಭ್ಯರ್ಥಿ ಹಾಗೂ ಏಜೆಂಟರಿಗೆ ಮನವಿ ಮಾಡಿದರು.

ಮತದಾನದ ದಿನದಂದು ಮತದಾನಕ್ಕಿಂತ ಮುಂಚಿತವಾಗಿ (90 ನಿಮಿಷ ಮುಂಚೆ) ಅಣಕು ಮತದಾನ ಪ್ರಕ್ರಿಯೆಯ ನಡೆಯಲಿದೆ. ಈ ಸಂದರ್ಭದಲ್ಲಿ ಅಭ್ಯರ್ಥಿಗಳ ಪರವಾಗಿರುವ ಏಜೆಂಟರು ಹಾಜರಿರಬೇಕು. ಒಂದು ವೇಳೆ ಏಜೆಂಟರು ಹಾಜರಿರದಿದ್ದರೆ 10 ನಿಮಿಷ ಕಾದು ನೋಡಿ, ಅಣಕು ಮತದಾನ ಪ್ರಕ್ರಿಯೆ ಪ್ರಾರಂಭ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿ ಹಾಗೂ ಏಜೆಂಟರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!