ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

0 Min Read

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಗುತ್ತಿಗೆದಾರ ಸಿದ್ದನಗೌಡ ಅವರಿಂದ ಕಾರ್ಯದರ್ಶಿ ಬಸವರಾಜಪ್ಪ 4 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಬಸವರಾಜ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *