Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬೈಕ್ ಗೆ ಲಾರಿ ಡಿಕ್ಕಿ : ವಿದ್ಯಾರ್ಥಿ ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 22 : ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಬೈಕ್ ಗೆ ಲಾರಿ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಚೇತನ್ ಕುಮಾರ್  (18 ವರ್ಷ) ಎಂದು ಗುರುತಿಸಲಾಗಿದೆ. ಕಾಲೇಜು ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ರಾಷ್ಟ್ರೀಯ ಹೆದ್ದಾರಿ 13 ರ ರೈಲ್ವೆ ಸೇತುವೆ ಬಳಿ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯಾರ್ಥಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು. ನಗರ ಸಂಚಾರಿ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment