Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ಗುತ್ತಿಗೆದಾರ ಸಂಘದ ಜಿಲ್ಲಾಧ್ಯಕ್ಷರಾಗಿ ಮಲ್ಲೇಶ್ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 09 : ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷನ್ನಾಗಿ ಹಾಲಿ ತಾಲ್ಲೂಕಾಧ್ಯಕ್ಷ ಕೆ.ಮಲ್ಲೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ತಿಳಿಸಿದ್ದಾರೆ.

 

ಎಸ್‌ಜಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಸಂಘದ ಸಭೆಯಲ್ಲಿ ಸರ್ವಾನುಮತದ ನಿರ್ಣಯದ ಮೇಲೆ ಈ ನೇಮಕ ಮಾಡಲಾಗಿದೆ. ನಗರಸಭೆ ಉಪಾಧ್ಯಕ್ಷ, ಪ್ರಭಾರ ಅಧ್ಯಕ್ಷರಾಗಿ ಆಡಳಿತ ನಡೆಸಿರುವ ಮಲ್ಲೇಶ್, ತಾಲ್ಲೂಕಾಧ್ಯಕ್ಷರಾಗಿ ಸಂಘದ ಬಲವರ್ಧನೆಗೆ ಶ್ರಮಿಸಿದ್ದಾರೆ. ಅವರ ಸಂಘಟನಾ ಚಟುವಟಿಕೆ ಗುರುತಿಸಿ ಈ ನೇಮಕ ಮಾಡಲಾಗಿದ್ದು, ತೆರವಾಗಿರುವ ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ಶೀಘ್ರ ಬೇರೆಯವರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನಗರದ ಜೆಜೆ ಹಟ್ಟಿ ಸಾಮಾನ್ಯ ಕುಟುಂಬದ ಮಲ್ಲೇಶ್ ನಗರಸಭೆ ಸದಸ್ಯ, ಉಪಾಧ್ಯಕ್ಷ, ಪ್ರಭಾರ ಅಧ್ಯಕ್ಷರಾಗಿ ಆಡಳಿತ ನಡೆಸಿದ ಅನುಭವ ಹೊಂದಿದ್ದಾರೆ. ಜಿಲ್ಲೆಯಲ್ಲಿ ಪ್ರಭಾವಿ ರಾಜಕೀಯ ಮುಖಂಡರು ಆಗಿರುವ ಕೆ.ಮಲ್ಲೇಶ್ ಜನಪರ ಹೋರಾಟಗಳಿಗೆ ಬೆನ್ನೆಲುಬಾಗಿ ನಿಂತಿದ್ದು, ಗುತ್ತಿಗೆದಾರರಾಗಿ ಉತ್ತಮ ಹೆಸರು ಗಳಿಸಿದ್ದಾರೆ. ಪ್ರಸ್ತುತ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಕುರಿತು ಸಂಘದ ರಾಜ್ಯ ನಿರ್ದೇಶಕ ಕುಮಾರಸ್ವಾಮಿ, ಪದಾಧಿಕಾರಿಗಳಾದ ಎಂ.ಮೈಲಾರಪ್ಪ, ರಮೇಶ್ ಕೋಟಿ, ಲಕ್ಷಣ್ ಇತರರು ಸಂತಸ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...