ಚಿತ್ರದುರ್ಗ. ಸೆ.04: ಚಿತ್ರದುರ್ಗ ಹಾಗೂ ಬಾಲೇನಹಳ್ಳಿ ರೈಲು ನಿಲ್ದಾಣಗಳ ಮಧ್ಯೆ ಚಿತ್ರದುರ್ಗ ನಗರದ ಎಪಿಎಂಸಿ ಬಳಿ ರೈಲು ಗಾಡಿಗೆ ಸಿಲುಕಿ ಸು. 30-35ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಕುರಿತು ಬುಧವಾರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವ್ಯಕ್ತಿಯು ಸು.5.5 ಅಡಿ ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈ ಬಣ್ಣ, ತಲೆಯಲ್ಲಿ ಸು.2 ಇಂಚು ಉದ್ದದ ಕಪ್ಪು ಕೂದಲು, ಕುರುಚಲು ಗಡ್ಡ ಮೀಸೆ ಹೊಂದಿದ್ದು, ಎಡಗೈಯಲ್ಲಿ ಊಂಖSಊA ಉ ಎಂಬ ಅಚ್ಚೆ ಗುರುತು ಇದೆ. ನೀಲಿ ಬಣ್ಣದ ಜರ್ಕಿನ್, ಬಿಳಿ ಬಣ್ಣದ ಸೀಮೆಂಟ್ ಪಟ್ಟಿಯ ರೆಡಿಮೇಡ್ ಅಂಗಿ, ನೀಲಿ ಬಣ್ಣದ ಪ್ಯಾಂಟ್, ಕಾಫಿ ಬಣ್ಣದ ಟೀ ಶರ್ಟ್ ಹಾಗೂ ಆರ್.ಕೆ.ಜಿ ಕಂಪನಿಯ ಅಂಡರ್ ವೇರ್ ಧರಿಸಿರುತ್ತಾರೆ.
ಈ ಮೇಲ್ಕಂಡ ಅಪರಿಚಿತ ವ್ಯಕ್ತಿಯ ಕುರಿತು ಮಾಹಿತಿ ತಿಳಿದು ಬಂದಲ್ಲಿ ದೂರವಾಣಿ ಸಂಖ್ಯೆ 9480802123 ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















