Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 01 : ಜಿಲ್ಲಾ ಕಾಂಗ್ರೆಸ್ ಸಮಿತಿಗೆ ವಕ್ತಾರರನ್ನಾಗಿ ಹಿರಿಯೂರಿನ ಶ್ರೀಮತಿ ಮಾನಸ  ಅವರನ್ನು ನೇಮಕ ಮಾಡಲಾಗಿದೆ.

ಇದೇ ಮೊದಲ ಭಾರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಮಹಿಳೆಯೊಬ್ಬರಿಗೆ ವಕ್ತಾರರನ್ನಾಗಿ ಉನ್ನತ ಹುದ್ದೆ ನೀಡಲಾಗಿದ್ದು . ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ಜಿಲ್ಲಾ ಅಧ್ಯಕ್ಷ ಎಂ ಕೆ ತಾಜ್ ಪೀರ್ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾನಸ, ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷದ ನಾಯಕರು ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ. ಕಾಂಗ್ರೆಸ್ ತತ್ವ ಸಿದ್ಧಾಂತ ಅನುಸಾರವಾಗಿ ಕೆಲಸ ಮಾಡುವುದಾಗಿ ಹೇಳಿದರು. ನಮ್ಮ ಕುಟುಂಬ ನಾಲ್ಕು ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಮಾಡಿದೆ. ನಾನು ಸಹ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿದ್ದು, ಇದನ್ನು ಪರಿಗಣಿಸಿ ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ನುಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ ಕೆ ತಾಜ್ ಪೀರ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸ ಇದ್ದು, ಸಾಮಾಜಿಕ ನ್ಯಾಯ ನಮ್ಮ ಮೂಲ ತತ್ವ. ಇದನ್ನು ಪರಿಪಾಲನೆ ಮಾಡಿಕೊಂಡು ಪಕ್ಷದ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್ ಶಿವಣ್ಣ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ ಬಾಬು,ಜಿ ಪಂ ಮಾಜಿ ಸದಸ್ಯ ಚಂದ್ರಪ್ಪ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಡಿ ಎನ್ ಮೈಲಾರಪ್ಪ,ಮುಖಂಡರುಗಳಾದ ಜಾನ್ಹವಿ ನಾಗರಾಜ್ ಮರುಳಾರಾಧ್ಯ,ಮಂಜುನಾಥ್, ಹಿರಿಯೂರು ನಗರ ಸಭೆ ಮಾಜಿ ಉಪಾಧ್ಯಕ್ಷೆ ಅಂಬಿಕಾ, ವಾಣಿ, ಚಿದಾನಂದ್ ಮೂರ್ತಿ, ರಾಮಚಂದ್ರಪ್ಪ, ಇತರರು ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now