Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಹಿಂದೂ ಮಹಾಗಣಪತಿ ವಿಸರ್ಜನೆ ಹಿನ್ನೆಲೆ; ಬೃಹತ್ ಬೈಕ್ ರ‌್ಯಾಲಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಅ. 01 : ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದವತಿಯಿಂದ ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ `ಹಿಂದೂ ಮಹಾಗಣಪತಿ ಮಹೋತ್ಸವ’ದ ಅಂಗವಾಗಿ ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಗುರುವಾರ ನಗರದಲ್ಲಿ ಬೈಕ್ ರ‌್ಯಾಲಿ ಯನ್ನು ನಗರದ ವಿವಿಧ ಬಡಾವಣೆಗಳಲ್ಲಿ ನಡೆಸಲಾಯಿತು.


ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕ ವೃತ್ತದಲ್ಲಿ ಇಂದು ಮುಂಜಾನೆ 10 ಗಂಟೆ ಸಮಯದಲ್ಲಿ ಹಮ್ಮಿಕೊಂಡಿದ್ದ ಬೈಕ್ ರ‌್ಯಾಲಿ ಗೆ ಬಜರಂಗದಳದ ಕರ್ನಾಟಕ ದಕ್ಷಿಣದ ಪ್ರಾಂತ ಸಂಯೋಜಕ್ ಪ್ರಭಂಜನ್ ಸೂರ್ಯ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಮಾದಾರ ಗುರು ಪೀಠದ ಡಾ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಮಾಜಿ ಶಾಸಕರುಗಳಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಬಿಜೆಪಿಯ ಉಮೇಶ್ ಕಾರಜೋಳ, ಅನಿತ್ ಕುಮಾರ್, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ, ಶಶಿಧರ್ ಬಸಮ್ಮ, ಬಿ.ಜಯ್ಯಪ್ಪ, ಹಿಂದೂ ಮಹಾ ಗಣಪತಿ ಸಮಿತಿಯ ಅಧ್ಯಕ್ಷರಾದ ಜಿ.ಆರ್.ಸುದೀರ್, ನಗರಾಭೀವೃದ್ದಿ ಪ್ರಾಧಿಕಾರ ಮಾಜಿ ಅಧ್ಯಕ್ಷರಾದ ಬದರಿನಾಥ್, ಅಶೋಕ್ ಕುಮಾರ್, ಕಾರ್ತಿಕ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಪ್ರಾರಂಭಗೊಂಡ ಬೈಕ್ ರ‌್ಯಾಲಿ ಸಂಗೊಳ್ಳಿ ರಾಯಣ್ಣ ವೃತ್ತ, ಬುರುಜನಹಟ್ಟಿ ಸರ್ಕಲ್, ಆನೆಬಾಗಿಲು, ಕೋಟೆ ರಸ್ತೆ, ಶ್ರೀ ಏಕನಾಥೇಶ್ವರಿ ಪಾದಗಟ್ಟೆ ವೃತ್ತ, ಕರುವಿನಕಟ್ಟೆ, ಜೋಗಿಮಟ್ಟಿ ರಸ್ತೆ, ಜಟ್‍ಪಟ್ ನಗರ, ಸ್ಟೇಡಿಯಂ ರಸ್ತೆ, ಬಿ.ಡಿ. ರಸ್ತೆ, ಮದಕರಿ ವೃತ್ತ, ಗಾಂಧಿ ವೃತ್ತ, ಎನ್.ಹೆಚ್.-4 ಸರ್ವಿಸ್ ರಸ್ತೆ, ಜೆ.ಸಿ.ಆರ್. ರಸ್ತೆ, ವಾಸವಿ ವೃತ್ತ, ಡಿ.ಸಿ. ವೃತ್ತ, ಅಂಬೇಡ್ಕರ್ ವೃತ್ತದ ಮುಖಾಂತರ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಬೈಕ್‍ರ್ಯಾಲಿ ಮುಕ್ತಾಯವಾಯಿತು. ಈ ಸಂದರ್ಭದಲ್ಲಿ ಸುಮಾರು 300 ರಿಂದ 500 ಬೈಕ್‍ಗಳಲ್ಲಿ ಯುವ ಜನತೆ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now