Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಫೆ. 22 ರಿಂದ 27ರವರೆಗೆ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ವೇದಮೂರ್ತಿ. ಎಂ.
ಭೀಮಸಮುದ್ರ, ಚಿತ್ರದುರ್ಗ (ತಾ)
ಮೊ : 8088076203

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 20 : ತಾಲ್ಲೂಕಿನ
ಭೀಮಸಮುದ್ರ ಸಮೀಪದ ಮುಜರೆ ಬಸಾಪುರ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಫೆಬ್ರವರಿ 22 ರಿಂದ 27ರವರೆಗೆ ಜರುಗಲಿದೆ ಎಂದು ದೇವಸ್ಥಾನದ ಸಮಿತಿಯವರು ತಿಳಿಸಿದ್ದಾರೆ.

ಫೆಬ್ರವರಿ. 22 ರಂದು ರುದ್ರಾಭಿಷೇಕ ಕಂಕಣ ಧಾರಣೆ ಪಲ್ಲಕ್ಕಿ ಉತ್ಸವ,
ಫೆಬ್ರವರಿ. 23 ರಂದು ಅಶ್ವತ್ಥೋತ್ಸವ,
ಫೆಬ್ರವರಿ 24 ರಂದು ವೃಷಭೋತ್ಸವ,
ಫೆಬ್ರವರಿ. 25 ರಂದು ಹೂವಿನ ಉತ್ಸವ ಗಜೋಸ್ತವ ಹಾಗೂ10 ಗಂಟೆಗೆ ಕೆಂಡಾರ್ಚನೆ,                                                 ಫೆಬ್ರವರಿ 26 ರಂದು ಬೆಳಿಗ್ಗೆ 11 ಗಂಟೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಗೂ ಸಂಜೆ 4 ಗಂಟೆಗೆ ಹೂವಿನ ಅಡ್ಡ ಪಲ್ಲಕ್ಕಿ ಉತ್ಸವ, ಸಂಜೆ 5:00 ಗಂಟೆಗೆ ಸ್ವಾಮಿಯ ರಥೋತ್ಸವ ನಡೆಯಲಿದೆ. ಫೆಬ್ರವರಿ. 27 ರಂದು ಕಂಕಣ ವಿಸರ್ಜನೆ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮ ನಡೆಯಲಿದೆ.

 

ವಿಶೇಷವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ. ಆಗಮಿಸುವ ವಧುವರರಿಗೆ ಬಟ್ಟೆ ತಾಳಿ ನೀಡಲಾಗುತ್ತದೆ. ಎಂದು ಸಮಿತಿಯ ಸದಸ್ಯರು ತಿಳಿಸಿದ್ದಾರೆ. ವಿವಾಹ ಕಾರ್ಯಕ್ರಮಕ್ಕೆ ಆಗಮಿಸುವ ವಧು-ವರರು ಹೆಸರು ನೋಂದಾಯಿಸಿಕೊಳ್ಳಬೇಕೆಂದು ದೇವಸ್ಥಾನದ ಕಾರ್ಯದರ್ಶಿ ಗಂಗಾಧರಪ್ಪ (ಮೊ : 9945054944) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...