ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 30 : ಕಾಂಗ್ರೆಸ್ ಯುವ, ವಿದ್ಯಾರ್ಥಿ ಘಟಕದಲ್ಲಿ ಒಂದು ದಶಕದ ಕಾಲ ಕಾರ್ಯಕರ್ತೆಯಾಗಿ ಪಕ್ಷ ಸಂಘಟನೆಯಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ನಗರದ ನಿವಾಸಿ, ಎಂಎಸ್ಸಿ ಪದವೀಧರೆ ಎಂ.ಸಿ.ಅರ್ಪಿತಾ ಅವರನ್ನು ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಜಿಲ್ಲಾಧ್ಯಕ್ಷೆ ಗೀತಾನಂದಿನಿ ಗೌಡ ನೇಮಕ ಮಾಡಿ ಆದೇಶಿಸಿದ್ದಾರೆ.
ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಸೇರಿ ಎಲ್ಲ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಲು ಸಂಘಟನೆ ಕಾರ್ಯಕೈಗೊಳ್ಳುವಂತೆ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಅರ್ಪಿತಾ ಅವರ ಪಕ್ಷನಿಷ್ಠೆ ಹಾಗೂ ಯುವ, ವಿದ್ಯಾರ್ಥಿ ಕಾಂಗ್ರೆಸ್ ಘಟಕದಲ್ಲಿ ಸಂಘಟನಾ ಸಾಮಥ್ರ್ಯ ಪರಿಗಣಿಸಿ ಅವರಿಗೆ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸುವಂತೆ ಮಾಜಿ ಸಚಿವ ಎಚ್.ಆಂಜನೇಯ, ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‍ಪೀರ್ ಶಿಫಾರಸ್ಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಾತಿ ಮಾಡಿ ಆದೇಶಿಸಲಾಗಿದೆ ಎಂದು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









