Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಗಾಂಧಿ ಜಯಂತಿ ಪ್ರಯುಕ್ತ ಮೆದೇಹಳ್ಳಿ ಗ್ರಾಮ ಪಂಚಾಯತಿಯಿಂದ ತ್ಯಾಜ್ಯ ವಿಲೇವಾರಿ ಬೈಕ್ ಟ್ರಾಲಿಗೆ ಚಾಲನೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಅ. 02 : ಗಾಂಧಿ ಜಯಂತಿ ಅಂಗವಾಗಿ ಮೆದೇಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿದ್ಯಾನಗರದಲ್ಲಿ ಘನತ್ಯಾಜ್ಯವನ್ನು ತ್ವರಿತವಾಗಿ ತೆರವುಗೊಳಿಸುವ ಉದ್ದೇಶದಿಂದ ಬೈಕ್ ಟ್ರಾಲಿಗೆ ಬುಧವಾರ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಪಂಚಾಯತಿಯ ಸ್ವಂತ ಸಂಪನ್ಮೂಲದಿಂದ ಈ ನೂತನ ವಾಹನವನ್ನು ಖರೀದಿಸಲಾಗಿದ್ದು, ಸಾರ್ವಜನಿಕ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕಾರ್ಯನಿರ್ವಾಹಕ ಅಧಿಕಾರಿ ವೈ. ರವಿಕುಮಾರ್ ಅವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಬಡಾವಣೆ ಹಾಗೂ ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡುವುದು ಮುಖ್ಯ ಗುರಿಯಾಗಿದೆ. ವಿಶೇಷವಾಗಿ ಚರಂಡಿಗಳಲ್ಲಿ ಶೇಖರವಾಗುವ ತ್ಯಾಜ್ಯ ಹಾಗೂ ರಸ್ತೆಬದಿಯ ಘನತ್ಯಾಜ್ಯವನ್ನು ತುರ್ತಾಗಿ ವಿಲೇವಾರಿ ಮಾಡಲು ಈ ಬೈಕ್ ಟ್ರಾಲಿ ಹೆಚ್ಚು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ರಾಘವೇಂದ್ರ, ಸತ್ಯನಾರಾಯಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆರ್. ಪಾತಣ್ಣ, ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ಕೆ. ಜಯಪ್ರಕಾಶ್ ರೆಡ್ಡಿ, ಉಪಾಧ್ಯಕ್ಷ ಅನಂತ ರಾಜ್, ನಿರ್ದೇಶಕ ಡಿ.ಎಸ್. ಮಲ್ಲಿಕಾರ್ಜುನ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಿರಂಜನ್, ಸಂಘದ ನಿಕಟಪೂರ್ವ ಗೌರವಾಧ್ಯಕ್ಷ ಜಿ. ಪರಶುರಾಮ್ ಸೇರಿದಂತೆ ಹಲವು ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now