ಚಿತ್ರದುರ್ಗ. ನ.23: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ನವೆಂಬರ್ 26ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಮೇಳದಲ್ಲಿ 08 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ.

ಸಂದರ್ಶನವು ನವೆಂಬರ್ 26ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ಚಿತ್ರದುರ್ಗ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರ ಇರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ. ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.
ಆಸಕ್ತ ಅಭ್ಯರ್ಥಿಗಳು 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಮತ್ತು 3 ಭಾವಚಿತ್ರಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಅಥವಾ ದೂರವಾಣಿ ಸಂಖ್ಯೆಗಳಾದ 7022459064, 8105619020, 9945587060, 9964528212, 7019755147 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.







