ಚಿತ್ರದುರ್ಗ. ಅ.09: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರವಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಆವರಣದಲ್ಲಿ ಅಕ್ಟೋಬರ್ 15ರಂದು ‘ಮಿನಿ ಉದ್ಯೋಗ ಮೇಳ’ ಆಯೋಜಿಸಲಾಗಿದೆ.
ಈ ಮೇಳದಲ್ಲಿ 6ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ವಿವಿಧ ಹುದ್ದೆಗಳಿಗೆ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಸಂದರ್ಶನವು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿದ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಲು ಅರ್ಹರಾಗಿದ್ದಾರೆ. ಆಸಕ್ತರು ತಮ್ಮ 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣಪತ್ರಗಳು ಹಾಗೂ ಫೆÇೀಟೋಗಳೊಂದಿಗೆ ನೇರವಾಗಿ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಅಥವಾ ದೂರವಾಣಿ ಸಂಖ್ಯೆ 7022459064, 8105619020 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.










