ಚಿತ್ರದುರ್ಗ,(ಮೇ.18) : ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ಪಾಟೀಲ್ ಅವರು ಮೇ 19 ಮತ್ತು 20ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಮೇ 19ರಂದು ಮೈಸೂರಿನಿಂದ ಹೊರಟು ಸಂಜೆ 7.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಮೇ 20 ರಂದು ಬೆಳಿಗ್ಗೆ 9.30ಕ್ಕೆ ಚಿತ್ರದುರ್ಗದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ತಾಲ್ಲೂಕಿನ ಬ್ಯಾಲಹಾಳ್ ಗ್ರಾಮದಲ್ಲಿ ಕಾಮಗಾರಿ ಉದ್ಘಾಟನೆ ನೆರವೇರಿಸುವರು. ಬೆಳಿಗ್ಗೆ 11 ಗಂಟೆಗೆ ಹಿರೇಕೆರೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಕೆ.ಆರ್.ಶಿವಕುಮಾರ್ ತಿಳಿಸಿದ್ದಾರೆ.