Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ವಾಹನಗಳ ಮೇಲೆ ‘PRESS’ ಬೋರ್ಡ್ ದುರುಪಯೋಗ: ಕಠಿಣ ಕಾನೂನು ಕ್ರಮಕ್ಕೆ ಜಿಲ್ಲಾ ಪೊಲೀಸ್ ಎಚ್ಚರಿಕೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 01 : ಮಾಧ್ಯಮ ರಂಗಕ್ಕೆ ಸಂಬಂಧಿಸಿಲ್ಲದ ವ್ಯಕ್ತಿಗಳು ತಮ್ಮ ಖಾಸಗಿ ವಾಹನಗಳ ಮೇಲೆ ‘ಪ್ರೆಸ್’ (PRESS) ಎಂದು ಹಾಕಿಕೊಂಡು ಸಂಚರಿಸುವುದು ಕಾನೂನು ಬಾಹಿರವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸರು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.

​ಸಾಮಾನ್ಯವಾಗಿ ಪತ್ರಕರ್ತರು ಮತ್ತು ಮಾಧ್ಯಮ ಕ್ಷೇತ್ರದ ಸಿಬ್ಬಂದಿ ತಮ್ಮ ಗುರುತಿಗಾಗಿ ವಾಹನಗಳ ಮೇಲೆ ‘PRESS’ ಎಂಬ ನಾಮಫಲಕವನ್ನು ಬಳಸುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧವಿಲ್ಲದ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಹಾಗೂ ಇತರೆ ವಾಹನಗಳ ಮೇಲೆ ‘PRESS’ ಬೋರ್ಡ್ ಹಾಕಿಕೊಂಡು ಸಂಚರಿಸುತ್ತಿರುವುದು ಕಂಡುಬಂದಿದೆ.

ಸಾಮಾನ್ಯ ಸಾರ್ವಜನಿಕರು ನಂಬರ್ ಪ್ಲೇಟ್ ಹಾಗೂ ವಾಹನಗಳ ಮೇಲೆ ಅಕ್ರಮವಾಗಿ ‘ಪ್ರೆಸ್’ ಎಂದು ಬರೆಸಿಕೊಂಡು ಚಲಾಯಿಸುತ್ತಿರುವುದನ್ನು ತಡೆಯಲು ಜಿಲ್ಲಾದ್ಯಂತ ವಿಶೇಷ ಅಭಿಯಾನ ನಡೆಸಲಾಗುತ್ತದೆ.
​ಚಿತ್ರದುರ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ‘ಸ್ಪೆಷಲ್ ಡ್ರೈವ್’ ನಡೆಸುವ ಮೂಲಕ ಇಂತಹ ವಾಹನಗಳನ್ನು ಪತ್ತೆ ಹಚ್ಚಿ, ನಿಯಮ ಉಲ್ಲಂಘಿಸುವ ವಾಹನ ಚಾಲಕರು ಹಾಗೂ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now