Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನೀರಿನಲ್ಲಿ ಮುಳುಗಿ ತಾಯಿ ಮಗಳು ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ನೀರಿನಲ್ಲಿ ಮುಳುಗಿ ತಾಯಿ ಮಗಳು ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ನಗರದ ತುರುವನೂರು ರಸ್ತೆಯ ಶ್ರೀ ತಿಪ್ಪೇರುದ್ರಸ್ವಾಮಿ ಮಠದಲ್ಲಿರುವ ನೀರಿನ ತೊಟ್ಟಿಯಲ್ಲಿ ಬಿದ್ದು ಗೀತಾ(40) ಹಾಗೂ ಪುತ್ರಿ ಪ್ರಿಯಾಂಕಾ(22) ಸಾವನ್ನಪ್ಪಿದ್ದಾರೆ.

ಸುರೇಶ್,  ಪತ್ನಿ ಗೀತಾ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ಸೇರಿದಂತೆ ನಾಲ್ವರೂ ಮಠದಲ್ಲಿಯೇ ಕೆಲವು ವರ್ಷಗಳಿಂದ  ವಾಸವಿದ್ದರು. ಮಂಗಳವಾರ ರಾತ್ರಿ ಸುರೇಶ್ ಹಾಗೂ ಪುತ್ರ ಹೊರಗಡೆ ಹೋಗಿದ್ದಾಗ ಮಠದಲ್ಲಿದ್ದ ಸುರೇಶ್ ಅವರ ಪತ್ನಿ ಮತ್ತು ಪುತ್ರಿ ಸಾವನ್ನಪ್ಪಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment