Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಬೈಕ್ ಗೆ ಕಾರು ಡಿಕ್ಕಿಯಾಗಿ ತಾಯಿ ದುರ್ಮರಣ, ಮಗನಿಗೆ ಗಂಭೀರ ಗಾಯ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ವೇಗವಾಗಿ ಬಂದ ಕಪ್ಪು ಬಣ್ಣದ ಥಾರ್ ವಾಹನ ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಮೃತಪಟ್ಟು, ಮಗ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ತಾಲೂಕಿನ ದಂಡಿನ ಕುರುಬರಹಟ್ಟಿ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ.

ರಾಮಜೋಗಿಹಳ್ಳಿ ನಿವಾಸಿ ಶ್ರೀಮತಿ ಶಾಂತಾ ಮೃತ ದುರ್ದೈವಿ ಹಾಗೂ ಅವರ ಮಗ ಗಿರೀಶ್ ರೆಡ್ಡಿ ಗಾಯಾಳು ಎಂದು ಗುರುತಿಸಲಾಗಿದೆ. ಅಕ್ಟೋಬರ್ 24ರ ಸಂಜೆ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಆಗಮಿಸಿದ ತಾಯಿ-ಮಗ, ನಗರದಲ್ಲಿದ್ದ ಸಂಬಂಧಿಕರ ಮನೆಯಿಂದ ತಮ್ಮ ಬೈಕ್ (KA-16 EF-0919) ತೆಗೆದುಕೊಂಡು ಸ್ವಗ್ರಾಮವಾದ ರಾಮಜೋಗಿಹಳ್ಳಿಗೆ ಹೊರಟಿದ್ದರು. ರಾತ್ರಿ ಸುಮಾರು 10:15ರ ಸಮಯದಲ್ಲಿ ದಂಡಿನ ಕುರುಬರಹಟ್ಟಿ ಗೇಟ್ ಸಮೀಪ ಚಿತ್ರದುರ್ಗ-ಚಳ್ಳಕೆರೆ ರಸ್ತೆಯಲ್ಲಿ ಸಾಗುತ್ತಿದ್ದಾಗ, ಹಿಂದಿನಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಅಪರಿಚಿತ ಕಪ್ಪು ಬಣ್ಣದ ಥಾರ್ ವಾಹನ ಇವರ ಬೈಕ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಬೈಕ್ ರಸ್ತೆ ಪಕ್ಕದ ಬೇಲಿಗೆ ಎಸೆಯಲ್ಪಟ್ಟಿದ್ದು, ಇಬ್ಬರೂ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತವೆಸಗಿದ ಥಾರ್ ಚಾಲಕ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ.

ರಸ್ತೆಯಲ್ಲಿ ಸಾಗುತ್ತಿದ್ದ ಸಾರ್ವಜನಿಕರು ತಕ್ಷಣವೇ ಗಾಯಾಳುಗಳನ್ನು ಉಪಚರಿಸಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನಿಸಲು ಯತ್ನಿಸಿದರಾದರೂ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ತೀವ್ರ ರಕ್ತಸ್ರಾವದಿಂದ ಶಾಂತಾರವರು ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಗಿರೀಶ್ ರೆಡ್ಡಿ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೃತರ ಶವವನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಘಟನೆ ಸಂಬಂಧ ಅಪಘಾತವೆಸಗಿ ಪರಾರಿಯಾಗಿರುವ ಕಪ್ಪು ಬಣ್ಣದ ಥಾರ್ ವಾಹನ ಹಾಗೂ ಅದರ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now