Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ : ಹೆಚ್ಚುವರಿ ಏಕಲವ್ಯ ವಸತಿ ಶಾಲೆಗೆ ಸಂಸದ ಗೋವಿಂದ ಎಂ.ಕಾರಜೋಳ ಮನವಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್.26 : ಸುಮಾರು 4 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಪಂಗಡಗಳ ಜನರು ವಾಸಿಸುತ್ತಿರುವ ಚಿತ್ರದುರ್ಗ ಜಿಲ್ಲೆಗೆ ಹಾಲಿ ಇರುವ ಏಕಲವ್ಯ ವಸತಿ ಶಾಲೆಯ ಜೊತೆಗೆ ಇನ್ನೊಂದು ಹೆಚ್ಚುವರಿ ಏಕಲವ್ಯ ವಸತಿ ಶಾಲೆಯನ್ನು ಮಂಜೂರು ಮಾಡಲು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಿಗೆ ಶಿಫಾರಸ್ಸು ಮಾಡುವಂತೆ ಸಂಸದ ಗೋವಿಂದ ಎಂ.ಕಾರಜೋಳ ರವರು ನಿನ್ನೆ(ಜೂನ್. 25, ಬುಧವಾರ) ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ರಾಷ್ಟ್ರೀಯ ಬಿ.ಜೆ.ಪಿ.ಅಧ್ಯಕ್ಷರಾದ ಜೆ.ಪಿ.ನಡ್ಡಾರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಸಾಕಷ್ಟು ಪರಿಶಿಷ್ಟ ಪಂಗಡಕ್ಕೆ ಸೇರಿದವರ ಜನಸಂಖ್ಯೆಯಿದೆ, ಅದರಲ್ಲೂ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಅತಿ ಹೆಚ್ಚು ಪರಿಶಿಷ್ಟ ವರ್ಗದ ಜನರು ವಾಸಿಸುತ್ತಿದ್ದಾರೆ, ಜಿಲ್ಲೆಯಲ್ಲಿ ಹಾಲಿ ಇರುವ ಏಕಲವ್ಯ ವಸತಿ ಶಾಲೆ ಬೇಡಿಕೆಯನ್ನೂ ಪೂರೈಸಲಾಗುತ್ತಿಲ್ಲ, ಪರಿಶಿಷ್ಟ ವರ್ಗಗಳ ಮಕ್ಕಳೂ ಕೂಡ ಗುಣಮಟ್ಟದ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು ಎನ್ನುವ ಆಶಯ ನನ್ನದಾಗಿದೆ ಎಂಬದನ್ನು ಸಚಿವರಿಗೆ ಸಂಸದರು ಮನದಟ್ಟು ಮಾಡಿದ್ದಾರೆ. ಏಕಲವ್ಯ ವಸತಿ ಶಾಲೆಗೆ ಅಗತ್ಯವಾಗಿರುವ 15 ಎಕರೆ ಜಮೀನನ್ನೂ ಸಹ ಗುರುತಿಸಲು ಈಗಾಗಲೇ ಕ್ರಮಕೈಗೊಂಡಿರುವುದಾಗಿ ಪತ್ರದಲ್ಲಿ ಸಂಸದರು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...