Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಸೈನಿಕರ ಆತ್ಮಸ್ಥೈರ್ಯಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮೃತ್ಯುಂಜಯ ಹೋಮ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಮೇ. 10 : ದೇಶದ ಹೆಮ್ಮೆಯ ವೀರ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಅವರ ಜೀವ ರಕ್ಷಣೆಗಾಗಿ ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ  ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ  ಶನಿವಾರ ಅಯ್ಯಪ್ಪ ಸ್ವಾಮಿ ದೇವರಿಗೆ ವಿಶೇಷವಾದ ಹೂವಿನ ಅಲಂಕಾರ ಹಾಗೂ ಮಹಾ ಮೃತ್ಯುಂಜಯ ಹೋಮವನ್ನುನೆರವೇರಿಸಲಾಯಿತು.

ಪಾಕಿಸ್ತಾನದ ಉಗ್ರರ ವಿರುದ್ಧ ಹೋರಾಡುತ್ತಿರುವ ಭೂ ಸೇನೆ ವಾಯು ಸೇನೆ ಹಾಗೂ  ನೌಕಾ ಸೇನೆ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು  ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪಹಲ್ಗಾವ್‍ನಲ್ಲಿ ಭಾರತೀಯರ ಮೇಲೆ ಭಯೋತ್ಪಾದಕರು ನಡೆಸಿದ  ದಾಳಿಗೆ ಪ್ರತೀಕವಾಗಿ ಆಪರೇಷನ್ ಸಿಂಧೂರ ಯಶಸ್ವಿಗಾಗಿ ಪೂಜೆ  ಹಮ್ಮಿಕೊಳ್ಳ ಲಾಯಿತು.

ಜಾಗತಿಕ ಮಟ್ಟದಲ್ಲಿ ಉಗ್ರರ ಉತ್ಪಾದನಾ  ಸ್ಥಾನವಾಗಿರುವ ಪಾಕಿಸ್ತಾನಕ್ಕೆ ಯುದ್ಧ ಮಾಡಲು ಸೈನಿಕರು ಮುಂದಾಗಿದ್ದಾರೆ  ಭಾರತ ದೇಶಕ್ಕೂ ಹಾಗೂ ಸೈನಿಕರಿಗೂ ಯುದ್ಧದಲ್ಲಿ ಪಾಲ್ಗೊಳ್ಳುತ್ತಿರುವ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೂ ಯಾವುದೇ ರೀತಿಯ ಜೀವ ಹಾನಿಯಾಗದಿರಲಿ ಹಾಗೂ  ಶತ್ರು ಸಂಹಾರವಾಗಲಿ. ಯುದ್ಧವು ಬೇಗನೆ  ಯುದ್ಧ ಮುಗಿದು ದೇಶದಲ್ಲಿ ಶಾಂತಿ  ನೆಲಸಲಿ  ಶ್ರೀ ಅಯ್ಯಪ್ಪ ಸ್ವಾಮಿ ದೇವರಲ್ಲಿ  ಪೂಜೆ ಹಾಗೂ ಸಂಕಲ್ಪ ಮಾಡಲಾಯಿತು .ವಿಶೇಷ ಪೂಜೆ ನಂತರ  ದೇವಸ್ಥಾನಕ್ಕೆ ಬಂದಂತಹ ಸಾರ್ವಜನಿಕರಿಗೆ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಯಿತು.

ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಶರಣ್ ಕುಮಾರ್,  ಕಾರ್ಯದರ್ಶಿ ಎಂ ಪಿ ವೆಂಕಟೇಶ್ ಹಾಗೂ ದೇವಸ್ಥಾನದ ನಿರ್ದೇಶಕರಾದಂತಹ ಮೋಹನ್ ಕುಮಾರ್  ರೇಷ್ಮೆಮಂಜುನಾಥ್  ವಕೀಲರಾದ ವಿಜಯಕುಮಾರ್ ರಮೇಶ್  ಮೋಹನ್ ಗಾಂಧಿ ಹಾಗೂ ದೇವಸ್ಥಾನದ  ಪ್ರಧಾನ ಅರ್ಚಕರಾದ ರಘು ರವರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...