Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ನಗರಸಭೆ ಪೌರ ಕಾರ್ಮಿಕರಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಪ್ರತಿಷ್ಠಾಪಿಸುವಂತೆ ಜಾಗೃತಿ ಜಾಥಾ

---Advertisement---

ಸುದ್ದಿಒನ್, ಚಿತ್ರದುರ್ಗ ಸೆ. 17 : ಚಿತ್ರದುರ್ಗ ನಗರಸಭೆ ಪೌರ ಕಾರ್ಮಿಕರಿಂದ ಪರಿಸರಕ್ಕೆ ಮಾರಕವಾಗಿರುವ ಪಿಒಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಗಣೇಶ ಮೂರ್ತಿಗಳ ಬದಲಾಗಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಪ್ರತಿಷ್ಠಾಪಿಸುವಂತೆ ನಡೆಸಿದ ಜಾಗೃತಿ ಜಾಥಾಕ್ಕೆ ಪೌರಾಯುಕ್ತರಾದ ಶ್ರೀಮತಿ ಎಂ.ರೇಣುಕಾ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು
ಈ ಬಾರಿಯ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು. ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ಪೂಜಿಸಬೇಕು. ಪರಿಸರಕ್ಕೆ ಮಾರಕವಾಗಿರುವ ಹಾಗೂ ರಾಸಾಯನಿಕಯುಕ್ತ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಬಳಸದಂತೆ ಸಾರವಜನಿಕರಲ್ಲಿ ಮನವಿ ಮಾಡಿದರು.

ಗಾಂಧಿ ವೃತ್ತದಲ್ಲಿ  ಬೆಳಿಗ್ಗೆ 6:30 ರ ಸುಮಾರಿಗೆ ಪೌರ ಕಾರ್ಮಿಕರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಮಣ್ಣಿನ ಗಣೇಶನನ್ನು ಪೂಜಿಸಿ, ಪಿಓಪಿ ಮೂರ್ತಿಯನ್ನು ತ್ಯಜಿಸಿ ಎಂದು ಘೋಷಣೆಯನ್ನು ಕೂಗುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಆರೋಗ್ಯ ನಿರೀಕ್ಷಕರಾದ ನಾಗರಾಜ್, ಶ್ರೀಮತಿ ಭಾರತಿ ಮತ್ತು ಬಸವರಾಜ್ ಸಿಬ್ಬಂದಿ ವರ್ಗದವರು ಸೇರಿದಂತೆ ಪೌರ ಕಾರ್ಮಿಕರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...