ಸುದ್ದಿಒನ್, ಚಿತ್ರದುರ್ಗ. ಆ.24: ಚಿತ್ರದುರ್ಗ ನಗರಸಭೆಯ ಸಭಾಂಗಣದಲ್ಲಿ ಇದೇ ಆಗಸ್ಟ್ 26ರಂದು ಬೆಳಿಗ್ಗೆ 10 ಗಂಟೆಯಿಂದ ಚಿತ್ರದುರ್ಗ ನಗರಸಭೆಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ನಗರಸಭೆ ಪೌರಾಯಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.
ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗದ ಮಹಿಳೆ ಹಾಗೂ
ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗದ ಮಹಿಳೆಗೆ ನಿಗದಿಪಡಿಸಲಾಗಿದೆ.
35 ಸದಸ್ಯ ಸ್ಥಾನವನ್ನು ಹೊಂದಿರುವ ಚಿತ್ರದುರ್ಗ ನಗರ ಸಭೆಯಲ್ಲಿ 17 ಬಿಜೆಪಿ, 7 ಪಕ್ಷೇತರರು, 06 ಜೆಡಿಎಸ್ ಮತ್ತು ಕಾಂಗ್ರೆಸ್‌ನ ಐವರು ಸದಸ್ಯರಲ್ಲಿ 15 ನೇ ವಾರ್ಡ್ ಸದಸ್ಯ ಡಿ. ಮಲ್ಲಿಕಾರ್ಜುನ ಅವರು ನಿಧನರಾಗಿದ್ದು ಕಾಂಗ್ರೆಸ್ 4 ಸದಸ್ಯ ಬಲ ಹೊಂದಿದೆ. ಈ ಚುನಾವಣಾ ಪ್ರಕ್ರಿಯೆಯಲ್ಲಿ ಚಿತ್ರದುರ್ಗ ಸಂಸದ ಮತ್ತು ಚಿತ್ರದುರ್ಗ ಶಾಸಕರಿಗೆ ಮತ ಚಲಾವಣೆಯ ಹಕ್ಕು ಇರುತ್ತದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















